Advertisement

ಮುಂಜಾಗ್ರತೆಗೆ ಆದ್ಯತೆ ನೀಡಿ: ಸಂಸದ ಬಚ್ಚೇಗೌಡ

11:55 AM Apr 05, 2020 | Suhan S |

ದೇವನಹಳ್ಳಿ: ಕೋವಿಡ್ 19 ಸೋಂಕು ಹರಡುವಿಕೆ ತಡೆಗೆ ಮುಂಜಾಗ್ರತೆ ಕ್ರಮಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ಬಿ.ಎನ್‌. ಬಚ್ಚೇಗೌಡ ತಿಳಿಸಿದರು.

Advertisement

ತಾಲೂಕು ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ನಡೆದ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಲಾಕ್‌ಡೌನ್‌ ಆದೇಶ ಶ್ಲಾಘನೀಯವಾಗಿದೆ. ಹರಡುವಿಕೆ ತಡೆಗೆ 4 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು, ತಾಲೂಕುವಾರು ತಹಶೀಲ್ದಾರ್‌ಗಳಿಗೆ ಹಂಚಲಾಗಿದೆ. ದೇವನಹಳ್ಳಿಗೆ 50 ಲಕ್ಷ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ತಾಲೂಕುಗಳಿಗೆ ತಲಾ 25 ಲಕ್ಷ ಬಿಡುಗಡೆಗೊಳಿಸಲಾಗಿದೆ. ಜತೆಗೆ ವಿಜ್ಞಾನ ಇಷ್ಟು ಮುಂದುವರಿದಿದ್ದರೂ, ಈವರೆಗೆ ಔಷಧ ಕಂಡುಹಿಡಿಯಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಶಾಸಕ ಟಿ.ವೆಂಕಟರಮಣಯ್ಯ, ಶರತ್‌ ಬಚ್ಚೇಗೌಡ, ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಮಾತನಾಡಿದರು. ಜಿಪಂ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಲ್ಲಾ ಪೊಲೀಸ್‌ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್‌, ಜಿಪಂ ಸಿಇಒ ಎನ್‌.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಜಗದೀಶ್‌.ಕೆ.ನಾಯಕ್‌, ಉಪ ಕಾರ್ಯದರ್ಶಿ ಕರಿಯಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾ ದೇವಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next