Advertisement

ಸ್ವಚ್ಛತೆಗೆ ಆದ್ಯತೆ ನೀಡಿ

11:15 AM Jul 14, 2019 | Suhan S |

ಕನಕಗಿರಿ: ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯ ಪೂರ್ಣ ವಾತಾವರಣವನ್ನು ಸೃಷ್ಟಿಸಬೇಕು. ಈ ನಿಟ್ಟಿನಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಾಪಂ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಪಾಟೀಲ ಹೇಳಿದರು.

Advertisement

ಸಮೀಪದ ಹಿರೇಮಾದಿನಾಳ ಗ್ರಾಮದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗ್ರಾಪಂ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಂಕ್ರಾಮಿಕ ರೋಗಗಳು ಮತು ಶೌಚಾಲಯದ ಬಳಕೆ ಕುರಿತ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರ ಸಾರ್ವಜನಿಕರ ಆರೋಗ್ಯಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಶೌಚಾಲಯವನ್ನು ಬಳಸಬೇಕು. ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ಹಸಿ ಮತ್ತು ಒಣ ಕಸವನ್ನಾಗಿ ವಿಂಗಡಿಸಿ, ವಿಲೇವಾರಿ ಮಾಡಲು ಸಹಕಾರಿಸಬೇಕು. ಅಮೃತಕ್ಕೆ ಸಮನಾದ ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕು. ಗಿಡಮರಗಳನ್ನು ಬೆಳಸಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರತಿಯೊಬ್ಬರೂ ಮಾಹಿತಿ ಪಡೆಯಬೇಕು ಎಂದರು.

ಇದೇ ವೇಳೆ ತಾಯಂದಿರ ಸಭೆ, ಆರೋಗ್ಯವಂತ ಶಿಶು ಪ್ರದರ್ಶನ ಹಾಗೂ ಪೌಷ್ಟಿಕ ಆಹಾರ ಶಿಬಿರ ನಡೆಯಿತು.

ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಲಕ್ಷ್ಮಮ್ಮ ನೀರಲೂಟಿ, ತಾಪಂ ಸದಸ್ಯ ಬಸವಂತಗೌಡ ಪಾಟೀಲ, ಅಭಿವೃದ್ಧಿ ಅಧಿಕಾರಿ ನಾಗೇಶ, ಪಿಜಿಡಿಎಚ್ಪಿಇ ವಿದ್ಯಾರ್ಥಿನಿ ದೇವಮ್ಮ, ಹಿರಿಯ ಆರೋಗ್ಯ ಸಹಾಯಕಿ ಸುಶೀಲಾದೇವಿ, ಅಂಗನವಾಡಿ ಮೇಲ್ವಿಚಾರಕಿ ರತ್ನಮ್ಮ ಹಾಗೂ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next