Advertisement

ಕುಡಿವ ನೀರಿಗೆ ಆದ್ಯತೆ ನೀಡಿ: ಶಾಸಕ

07:13 AM Jun 04, 2020 | Lakshmi GovindaRaj |

ಬೇಲೂರು: ತಾಲೂಕಿನಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಈ ವಿಚಾರದಲ್ಲಿ ಲೋಪದೋಷ ಡುಬಂದರೆ ಗ್ರಾಪಂ ಅಭಿವೃದಿಟಛಿ ಅಧಿಕಾರಿಗಳನ್ನೇ  ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಶಾಸಕ ಕೆ.ಎಸ್‌.ಲಿಂಗೇಶ್‌ ಎಚ್ಚರಿಸಿದರು.

Advertisement

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 37 ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ  ಕಾಮಗಾರಿ ನನೆಗುದಿಗೆ ಬಿದ್ದಿದೆ. ಈಗಾಗಲೇ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಅವಧಿ ಪೂರ್ಣಗೊಂಡಿದೆ. ಈ ನಿಟ್ಟಿನಲ್ಲಿ ಪಿಡಿಒಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು.

ಕೊರೊನಾ ಹರಡದಂತೆ ಎಚ್ಚರಿಕೆ  ವಹಿಸಬೇಕು ಎಂದರು. ಜೂ.25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ಗೊಳ್ಳಿದೆ. ಇದಕ್ಕಾಗಿ ತಾಲೂಕು ಆಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ. ತಾಲೂಕಿನಲ್ಲಿ 1,990 ಮಕ್ಕಳಿಗೆ ಸ್ಯಾನಿಟೈಸರ್‌, ಮುಖಗವಸುಗಳನ್ನು  ವಿತರಿಸಲಾಗುವುದು. 9 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪರೀಕ್ಷೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿಯನ್ನು ತಪಾಸಣೆ ಮಾಡಲಾಗುವುದು.

ಉಚಿತ ಬಸ್‌ ಪಾಸ್‌ ವ್ಯವಸ್ಥೆ ಕಲ್ಪಸಲಾಗುವುದು ಎಂದು ಮಾಹಿತಿ ನೀಡಿದರು.  ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹೇಶ್‌, ತಾಲೂಕು ಪಂಚಾಯಿತಿ ಇಒ ರವಿಕುಮಾರ್‌, ತಾಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ತೋಟಗಾರಿಕೆ ಇಲಾಖೆ ಅಧಿಕಾರಿ ಸೀಮಾ, ತಹಶೀಲ್ದಾರ್‌ ಎಸ್‌. ನಟೇಶ್‌, ಬಿಇಒ ಲೋಕೇಶ್‌,  ಡಿಪೋ  ವ್ಯವಸ್ಥಾಪಕ ಭೈರೇಗೌಡ, ಸಿಪಿಐ ಸಿದ್ದರಾಮಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್‌, ಆರೋಗ್ಯಾಧಿಕಾರಿ ಡಾ. ವಿಜಯ್‌ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next