Advertisement
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2021-22 ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
Related Articles
Advertisement
ಕೆ.ಆರ್. ನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಟಿ.ವಿಜಯ್ ಮಾತನಾಡಿ, ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಯಲ್ಲಿರುವ ಸೃಜನಾತ್ಮಕ ಚಿಂತನೆಯನ್ನು ಹೊರಗೆಳೆಯುವುದಲ್ಲದೇ, ಅವರ ವ್ಯಕ್ತಿತ್ವ ವಿಕಸನದಲ್ಲೂ ಸಹಾಯ ಮಾಡುತ್ತದೆ.
ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ಶಿಕ್ಷಣದ ನಂತರ ಏನು ಮಾಡಬೇಕು, ಯಾವ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಅರಿವಿರಬೇಕು. ಆಗ ಓದಿದ ವಿದ್ಯೆ ಸಾರ್ಥಕಗೊಳ್ಳುತ್ತದೆ. ವಿದ್ಯಾರ್ಥಿಗಳಿಗ ಒಳಿತಿಗೆ ಸದಾ ಶ್ರಮಿಸುವ ಪೋಷಕರ ಬಗ್ಗೆ ಕಾಳಜಿ ಇರಬೇಕಾದ್ದು ಬಹು ಮುಖ್ಯ. ಈ ಎಲ್ಲದರ ಪಾಲನೆಯಿಂದ ಒಬ್ಬ ಉತ್ತಮ ನಾಗರಿಕ ರೂಪುಗೊಳ್ಳುತ್ತಾನೆ ಎಂದರು.
ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದೇವರಾಜ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ವಿವಿಧ ಸಮಿತಿಗಳ ಸಂಚಾಲಕರಾದ ಪ್ರಸಾದ್, ವಿಶ್ವನಾಥ್, ಮಾಯಾದೇವಿ, ಅಂಬಿಕಾ, ರಾಜಗೋಪಾಲ್, ಗುರು ಬಸವರಾಜ ಸ್ವಾಮಿ ಪಂಡಿತ್, ಶೈಲಜಾ, ಸಾಗರ್, ನಫೀಜ್ ಉಲ್ಲಾ ಷರೀಫ್, ಮುಖಂಡರಾದ ನಾಗೇಂದ್ರ, ಜಲೇಂದ್ರ, ಅಶೋಕ್, ರಾಜು, ಗೋಪಾಲ್ ರಘುನಾಥ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.