Advertisement
ಮಂಗಳವಾರ ವಿಧಾನಸೌಧದಲ್ಲಿ ನಡೆದ ಬೆಂಗಳೂರು ನಗರ ಸೈಬರ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ ನಿಗ್ರಹ ಪೊಲೀಸ್ ಠಾಣೆಗಳು ಮತ್ತು ಭಯೋತ್ಪಾದನಾ ನಿಗ್ರಹ ದಳದ ಉದ್ಘಾಟನಾ ಸಮಾರಂಭ ಹಾಗೂ 88 ಹೆದ್ದಾರಿ ಗಸ್ತು ವಾಹನಗಳಿಗೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು. ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅಪರಾಧಗಳ ಸಂಖ್ಯೆಯನ್ನು ಕಡಿಮೆ ಮಾಡುವುದರ ಜೊತೆಗೆ ಪೊಲೀಸರ ಯೋಗಕ್ಷೇಮವನ್ನು ನೋಡಿಕೊಳ್ಳುವುದಕ್ಕೂ ಸರ್ಕಾರ ಆದ್ಯತೆ ನೀಡಿದೆ ಎಂದರು.
Related Articles
Advertisement
ಭಯೋತ್ಪಾದನಾ ಮುಕ್ತ ನಗರ ನಮ್ಮ ಗುರಿ: ಬೆಂಗಳೂರಿನಲ್ಲಿ ಭಯೋತ್ಪಾದಕ ಸ್ಲಿಪರ್ ಸೆಲ್‌ಗಳಿವೆ ಎಂದು ಎನ್‌ಐಎ ಮಾಹಿತಿ ಬಂದಿದೆ. ಹೀಗಾಗಿ, ಬೆಂಗಳೂರಿಗೆ ಪ್ರತ್ಯೇಕ ಭಯೋತ್ಪಾದಕ ನಿಗ್ರಹ ದಳ ಸ್ಥಾಪನೆ ಮಾಡುತ್ತಿದ್ದೇವೆ. ಬೆಂಗಳೂರನ್ನು ಭಯೋತ್ಪಾದನಾ ಮುಕ್ತ ಹಾಗೂ ನಾಗರಿಕ ಸ್ನೇಹಿ ನಗರ ಮಾಡುವುದು ನಮ್ಮ ಗುರಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸೈಬರ್ ಕ್ರೈಂ ಹಾಗೂ ಆರ್ಥಿಕ ಅಪರಾಧಗಳ ನಡುವೆ ನೇರ ಸಂಬಂಧ ಇದೆ.
ಇತ್ತೀಚೆಗೆ ಸೈಬರ್ ಕ್ರೈಂ, ಆರ್ಥಿಕ ಅಪರಾಧ ಹಾಗೂ ಮಾದಕ ವಸ್ತು ಮಾರಾಟ ಬಳಕೆ ಪ್ರಕರಣಗಳು ಹೆಚ್ಚಾಗಿವೆ. ಒಂದೊಂದು ಸೈಬರ್ ಠಾಣೆಗಳಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾದಾಗ ನಿರ್ವಹಣೆ ಕಷ್ಟವಾಗಿತ್ತು. ಹೀಗಾಗಿ, ಬೆಂಗಳೂರು ವಿಭಾಗದಲ್ಲಿ 8 ಸೈಬರ್ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗುತ್ತಿದೆ. ಈ ಠಾಣೆಗಳಲ್ಲಿ 35 ರಿಂದ 50 ಸಾವಿರ ಮಾಸಿಕ ಸಂಬಳ ನೀಡಿ ಐಟಿ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.
ಪೊಲೀಸರು ಅಪ್‌ಡೇಟ್ ಆಗಬೇಕು: ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ಇತ್ತೀಚೆಗೆ ಫೇಸ್‌ಬುಕ್ ಹಾಗೂ ವಾಟ್ಸ್‌ಆ್ಯಪ್‌ಗ್ಳಲ್ಲಿ ಫೇಕ್ ಸುದ್ದಿಗಳ ಹಾವಳಿ ಹೆಚ್ಚಾಗಿದೆ. ಅದನ್ನು ಮಟ್ಟ ಹಾಕಬೇಕಿದೆ. ಯುವ ಪೀಳಿಗೆ ಮಾದಕ ವಸ್ತುಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಪೊಲೀಸರು ಮನಸು ಮಾಡಿದರೆ ಒಂದೇ ನಿಮಿಷದಲ್ಲಿ ಇದನ್ನು ನಿಯಂತ್ರಿಸಬಹುದು. ಶಾಲಾ-ಕಾಲೇಜುಗಳ ಬಳಿ ಡ್ರಗ್ಸ್ ಮಾರಾಟ ನಡೆಯುತ್ತಲೇ ಇದೆ. ಇದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಭಯೋತ್ಪಾದನೆ ವಿಷಯದಲ್ಲಿ ಯಾವತ್ತೂ ಹೊಂದಾಣಿಕೆ ಮಾಡಿಕೊಳ್ಳಬೇಕಿಲ್ಲ. ಯಾವುದೇ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಹಣೆ ಪಟ್ಟಿ ಕಟ್ಟುವ ಮೊದಲು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕು. ಇಲ್ಲದಿದ್ದರೆ ಅವರು ಸುಲಭವಾಗಿ ಹೊರ ಬರುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ: ಬೊಮ್ಮಾಯಿಬೆಂಗಳೂರು: ರಾಷ್ಟ್ರೀಯ ಪೌರತ್ವ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಷ್ಟ್ರೀಯ ಪೌರತ್ವ ಕಾಯ್ದೆ ಸಂಸತ್ತಿನ ಎರಡೂ ಸದನಗಳಲ್ಲಿ ಅನುಮೋದನೆಗೊಂಡಿದ್ದು, ರಾಷ್ಟ್ರಪತಿಯವರು ಅದಕ್ಕೆ ಅಂಕಿತ ಹಾಕಿದ್ದಾರೆ. ಅಲ್ಲದೇ ಅದು ಸಮವರ್ತಿ ಪಟ್ಟಿಯಲ್ಲಿದೆ. ಹಾಗಾಗಿ, ಎಲ್ಲ ರಾಜ್ಯಗಳು ಈ ಕಾಯ್ದೆಯನ್ನು ಜಾರಿಗೊಳಿಸಬೇಕು. ಕೆಲವು ರಾಜ್ಯಗಳು ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ ಎಂದರು. ಅಸ್ಸಾಂ, ದೆಹಲಿ, ಉತ್ತರ ಪ್ರದೇಶದಲ್ಲಿ ನಡೆದಂತೆ ರಾಜ್ಯದಲ್ಲಿ ಹಿಂಸಾತ್ಮಕ ಘಟನೆಗಳು ನಡೆಯುವುದಿಲ್ಲ ಎಂಬ ವಿಶ್ವಾಸ ಇದೆ. ಅಲ್ಲದೇ ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದೇ ವೇಳೆ, ತಾವು ಜಲ ಸಂಪನ್ಮೂಲ ಖಾತೆಗೆ ಮುಖ್ಯಮಂತ್ರಿ ಬಳಿ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು. ಯಾವುದೇ ಖಾತೆಗೂ ನಾನು ಬೇಡಿಕೆ ಇಟ್ಟಿಲ್ಲ. ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ಯಾವುದೇ ಊಹಾಪೋಹ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದರು.