Advertisement

ರಾಜ್ಯದ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ; ಸಿಎಂ ಬೊಮ್ಮಾಯಿ ದಿಲ್ಲಿ ಪ್ರವಾಸ ಫ‌ಲಪ್ರದ

12:25 AM Dec 01, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ಬಾರಿಯ ದಿಲ್ಲಿ ಪ್ರವಾಸ ಫ‌ಲಪ್ರದವಾಗಿದ್ದು, ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಿ ಬಾಕಿಯಿರುವ ರಾಜ್ಯದ ಹಲವು ಯೋಜನೆಗಳ ತ್ವರಿತಗತಿಯ ಅನುಷ್ಠಾನಕ್ಕೆ ಸಮಾಲೋಚನೆ ನಡೆಸಿದರು.

Advertisement

ಮೂರು ದಿನಗಳ ಕಾಲ ಸಂಪೂರ್ಣವಾಗಿ ರಾಜ್ಯದ ಅಭಿವೃದ್ದಿ ಯೋಜನೆಗಳಿಗೆ ಸಂಬಂಧಿಸಿ ಕೇಂದ್ರ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳಿಗೆ ಅಗತ್ಯವಾದ ಅನುಮತಿ ಹಾಗೂ ಇತರ ಒಪ್ಪಿಗೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ.

ಕೇಂದ್ರ ಗೃಹ ಮಂತ್ರಿ ರಾಜನಾಥ ಸಿಂಗ್‌ ಅವರನ್ನು ಭೇಟಿ ಮಾಡಿ ರಕ್ಷಣ ಇಲಾಖೆಯ ಸುಪರ್ದಿಯಲ್ಲಿರುವ ಜಮೀನನ್ನು ರಾಜ್ಯ ಸರಕಾರಕ್ಕೆ ಹಸ್ತಾಂತರಿಸುವ ಬಗ್ಗೆ ಚರ್ಚಿಸಿದ ಮುಖ್ಯಮಂತ್ರಿಯವರು, ಬೆಳಗಾವಿ ಜಿಲ್ಲೆ ಯಲ್ಲಿರುವ 732.24 ಎಕರೆ ಜಮೀನು ರಕ್ಷಣ ಇಲಾಖೆಗೆ ಅಗತ್ಯವಿಲ್ಲದ ಕಾರಣ ಈ ಜಾಗದಲ್ಲಿ ಜ್ಞಾನಾಧಾರಿತ ಆರ್ಥಿಕತೆಗೆ ಮತ್ತಷ್ಟು ಒತ್ತು ನೀಡುವ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮನವಿ ಮಾಡಿದರು.

ಕೇಂದ್ರ ಜಲಶಕ್ತಿ ಮಂತ್ರಿ ಗಜೇಂದ್ರ ಶೆಖಾವತ್‌ ಅವರನ್ನು ಭೇಟಿ ಮಾಡಿ ನೀರಾವರಿ ಯೋಜನೆಗಳ ಬಗ್ಗೆ, ಕೇಂದ್ರ ಸಚಿವ ಪಿಯೂಶ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಜವುಳಿ ಪಾರ್ಕ್‌ ಬಗ್ಗೆ, ಕೇಂದ್ರ ಅರಣ್ಯ ಪರಿಸರ ಸಚಿವರಾದ ಭೂಪೇಂದ್ರ ಯಾದವ್‌ ಅವರೊಂದಿಗೆ ಕರ್ನಾಟಕದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ವನ್ಯಧಾಮ ಹಾಗೂ ಅರಣ್ಯ ಕಾಯ್ದೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದರು.

ಗಡಿ ವಿವಾದಕ್ಕೆ ಸಂಬಂಧಿಸಿ ಹಿರಿಯ ವಕೀಲ ರೋಹಟಗಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಲ್ಲದೆ ಮತ್ತೂಬ್ಬ ಹಿರಿಯ ವಕೀಲ ಫಾಲಿ ಎಸ್‌. ನಾರಿಮನ್‌ ಅವರನ್ನೂ ಭೇಟಿ ಮಾಡಿದರು.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next