Advertisement

ಡಾಂಬರೀಕರಣ: ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ ನೀಡಿ

08:54 PM Jan 04, 2022 | Team Udayavani |

ಗದಗ: ರಸ್ತೆ ನಿರ್ಮಾಣ, ದುರಸ್ತಿ ಕಾಮಗಾರಿ ಕೈಗೊಳ್ಳುವಾಗ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

Advertisement

ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಸೋಮವಾರ ರಸ್ತೆ ಮರು ಡಾಂಬರೀಕರಣ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, 690 ಲಕ್ಷ ರೂ. ಅಂದಾಜು ಮೊತ್ತದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಚಿಕ್ಕಮಣ್ಣೂರ, ಸವಡಿ, ಡ.ಸ. ಹಡಗಲಿ, ಗುಜಮಾಗಡಿ, ಹುಯಿಲಗೋಳ, ಹಿರೇಕೊಪ್ಪ, ಚಿಕ್ಕೊಪ್ಪ, ಬೆಟಗೇರಿ-ಗದಗ ವರೆಗಿನ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯಾಗಿದೆ. ಬಾಗಲಕೋಟೆ-ಬಿಳಿಗಿರಿರಂಗನ ಬೆಟ್ಟ ರಾಷ್ಟ್ರೀಯ ಹೆದ್ದಾರಿ 57ರ ರಸ್ತೆ 72.27 ಕಿ.ಮೀ ಇಂದ 92 ಹಾಗೂ 92.50 ಇಂದ 100ರ ವರೆಗೆ ಮರು ಡಾಂಬರೀಕರಣ ಮಾಡುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಕಾಮಗಾರಿಯನ್ನು ನಿಗದಿತ ಅವಧಿ ಯೊಳಗೆ ಪ್ರಾರಂಭಿಸಿ ಮುಕ್ತಾಯಗೊಳಿಸಬೇಕು. ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

6.25 ಕೋಟಿ ಅನುದಾನದಲ್ಲಿ ಈ ಭಾಗದ ಹಳ್ಳದ ದುರಸ್ತಿಗೆ ಅನುದಾನ ಮಂಜೂರಾಗಿದೆ. ಅದೇ ರೀತಿ 6.15 ಕೋಟಿ ಅನುದಾನವು ಹಾತಲಗೇರಿ ಹತ್ತಿರದ ಹಳ್ಳ ದುರಸ್ಥಿಗೆ ಅನುದಾನ ಮಂಜೂರಾತಿ ದೊರಕಿದೆ. ಈ ಭಾಗದ ಹಲವು ಗ್ರಾಮಗಳಿಗೆ ಅನುಕೂಲವಾಗಲಿದೆ. ಕಾಮಗಾರಿ ಸುಸೂತ್ರವಾಗಿ ನಿರ್ವಹಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.

ಗ್ರಾಮಸ್ಥರು ಗ್ರಾಮದ ಸಮಸ್ಯೆಗಳ ಹಾಗೂ ಕಾಮಗಾರಿಗಳ ಬಗ್ಗೆ ಅಹವಾಲುಗಳನ್ನು ಆಲಿಸಿದ ಸಚಿವರು, ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಕೋವಿಡ್‌ ಸಂಕಷ್ಟದಿಂದ ಆರ್ಥಿಕ ಹಾಗೂ ಭೌತಿಕ ಅಭಿವೃದ್ಧಿ ಕುಂಠಿತವಾಗಿದೆ. ಈ ನಷ್ಟವನ್ನು ಸರಿದೂಗಿಸಿ, ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಗ್ರಾ.ಪಂ. ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಎಸ್‌ ಡಿಎಂಸಿ ಅಧ್ಯಕ್ಷ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next