Advertisement

ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೆ ಆದ್ಯತೆ ನೀಡಿ

09:20 PM Feb 12, 2020 | Lakshmi GovindaRaj |

ಯಳಂದೂರು: ಗ್ರಾಮೀಣ ಭಾಗದಲ್ಲಿ ಶಿಕ್ಷಣವನ್ನು ಇನ್ನಷ್ಟು ಉತ್ತೇಜಿಸಬೇಕಿದೆ. ಸರ್ಕಾರ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ. ಆದರೆ, ಇದನ್ನು ಮಕ್ಕಳಿಗೆ ತಲುಪಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ.

Advertisement

ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೆ ಇನ್ನಷ್ಟು ಆದ್ಯತೆ ನೀಡುವ ಕೆಲಸವಾಗಬೇಕು ಎಂದು ಶಾಸಕ ಎನ್‌.ಮಹೇಶ್‌ ಸಲಹೆ ನೀಡಿದರು. ತಾಲೂಕಿನ ಬನ್ನಿಸಾರಿಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲೂ ಇಂತಹ ಉತ್ಸವಗಳ ಆಚರಣೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಮಕ್ಕಳಲ್ಲೂ ಖಾಸಗಿ ಶಾಲೆಯ ಮಕ್ಕಳಂತೆ ನಾವು ಕೂಡ ಸಹಪಠ್ಯ ಚಟುವಟಿಕೆಗಳಲ್ಲೂ ಮುಂದಿದ್ದೇವೆ ಎಂಬ ಅರಿವು ಮೂಡಿಸುವ ಕೆಲಸ ಇಂತಹ ಕಾರ್ಯಕ್ರಮಗಳ ಮೂಲಕ ಮನದಟ್ಟು ಮಾಡಿಕೊಟ್ಟಿರುವುದು ಸಾರ್ಥಕದ ಕೆಲಸವಾಗಿದೆ ಎಂದು ಹೇಳಿದರು.

ಶೈಕ್ಷಣಿಕ ಪ್ರಗತಿಗೆ ಕೆಲಸ ಮಾಡಿ: ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದಂತೆ ಗ್ರಾಮೀಣ ಮಕ್ಕಳಲ್ಲಿ ಚೈತನ್ಯ ತುಂಬುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಇವರ ಪೋಷಕರಿಗೆ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಹೇಳುವ ಕೆಲಸವಾಗಬೇಕು.

ಶಿಕ್ಷಣ ಯಾವ ರೀತಿ ನೀಡಿದರೆ ಅನುಕೂಲವಾಗುತ್ತದೆ ಎಂಬ ಅರಿವನ್ನು ಮೂಡಿಸಬೇಕು. ಉಚಿತ ಶಿಕ್ಷಣಕ್ಕೆ ಸರ್ಕಾರ ನೀಡಿರುವ ಸೌಲಭ್ಯಗಳ ಮನವರಿಕೆ ಮಾಡಿಕೊಡಬೇಕು. ಈ ಮೂಲಕ ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.

Advertisement

ಮಕ್ಕಳಿಗೆ ಬಹುಮಾನ ವಿತರಣೆ: ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ಮಕ್ಕಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಜೆ.ಯೋಗೇಶ್‌, ತಾಲೂಕು ಪಂಚಾಯ್ತಿ ಅಧ್ಯಕ್ಷ ನಿರಂಜನ್‌, ಸದಸ್ಯರಾದ ಮಲ್ಲಾಜಮ್ಮ ನಂಜಯ್ಯ, ಶಾರದಮ್ಮ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಹೇಶ್‌, ಉಪಾಧ್ಯಕ್ಷೆ ಗಾಯತ್ರಿ, ಸದಸ್ಯರಾದ ಚಂದ್ರಮ್ಮ, ಗೋವಿಂದ ನಾಯಕ, ಎಸ್‌ಡಿಎಂಸಿ ಅಧ್ಯಕ್ಷ ಗೋವಿಂದ ನಾಯಕ, ಉಪಾಧ್ಯಕ್ಷ ಸಿದ್ದಪ್ಪ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ತಿರುಮಲಾಚಾರ್‌, ಶಾಲಾ ಮುಖ್ಯಶಿಕ್ಷಕ ಜಯಮ್ಮ, ಶಿಕ್ಷಕರಾದ ಮಹೇಶ್‌, ಸೌಮ್ಯ, ಉಷಾ ಸೇರಿದಂತೆ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next