Advertisement

ಕೋವಿಡ್‌ ಜನಜಾಗೃತಿ ಹೆಚ್ಚಿಸಲು ಆದ್ಯತೆ: ಡಿಸಿ

01:32 PM Jul 17, 2020 | Suhan S |

ಧಾರವಾಡ: ಸಾರ್ವಜನಿಕರಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡುವ, ಸ್ಯಾನಿಟೈಜರ್‌ ಬಳಕೆ ಕುರಿತು ಜನಜಾಗೃತಿ ಮೂಡಿಸುವ ಕಾರ್ಯ ಅಗತ್ಯವಿದ್ದು, ಸ್ವಯಂ ಸೇವಕರಾಗಿ ಪಾಲ್ಗೊಳ್ಳಲು ಸಿದ್ಧರಿರುವವರ ತಂಡ ರಚಿಸಿ, ಜನಜಾಗೃತಿ ಹೆಚ್ಚಿಸಲು ಆದ್ಯತೆ ನೀಡಲಾಗುವುದೆಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹೇಳಿದರು.

Advertisement

ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾಜಿಕ ಅಂತರ ಕಾಪಾಡಲು ರಚಿಸಿರುವ ಸಮಿತಿ ಹಾಗೂ ವಿವಿಧ ಸ್ವಯಂ ಸೇವಾ ಸಮಿತಿ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಸಮುದಾಯದಲ್ಲಿ ಕೋವಿಡ್ ವೈರಸ್‌ ಕುರಿತು ತಿಳಿವಳಿಕೆ ಮೂಡಿಸಬೇಕು. ಈ ಕಾರ್ಯಕ್ಕಾಗಿ ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ 67 ವಾರ್ಡ್ ಗಳಲ್ಲಿ 67 ವಾರ್ಡ್‌ ಟಾಸ್ಕ್ ಪೊರ್ಸ್‌ ಸಮಿತಿಗಳನ್ನು ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿದೆ. ಸಮಿತಿಯಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಸೇರಿ 5 ಜನ ಸದಸ್ಯರಿರುತ್ತಾರೆ. ಇದರಲ್ಲಿ ಆಸಕ್ತ ಸ್ವಯಂ ಸೇವಕರನ್ನು ಸೇರಿಸಲಾಗುತ್ತದೆ. ಸಮಿತಿ ಸದಸ್ಯರಿಗೆ ಗುರುತಿನ ಚೀಟಿ ನೀಡಲಾಗುತ್ತದೆ ಎಂದರು.

ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ ಮಾತನಾಡಿ, ವಾರ್ಡ್‌ ಟಾಸ್ಕ್ ಪೋರ್ಸ್‌ ಸಮಿತಿ ಸದಸ್ಯರಾಗಿ ಪಾಲಿಕೆ, ಕಂದಾಯ, ಪೊಲೀಸ್‌ ಇಲಾಖೆ ಅಧಿಕಾರಿಗಳು ಇರುತ್ತಾರೆ. ಅವರು ಮಾಸ್ಕ್ ಧರಿಸದೆ ಇರುವವರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ, ತ್ಯಾಜ್ಯ ಚೆಲ್ಲುವವರ ವಿರುದ್ಧ ಅವರು ದಂಡ ವಿಧಿಸಲಿದ್ದಾರೆಂದರು. ಜಿಪಂ ಸಿಇಒ ಡಾ|ಬಿ.ಸಿ.ಸತೀಶ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶವಂತ ಕ್ಷೀರಸಾಗರ, ಅಬಕಾರಿ ಉಪ ಆಯುಕ್ತ ಶಿವನಗೌಡ ಪಾಟೀಲ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಭರಮಕ್ಕನವರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next