Advertisement

ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ

04:14 PM Sep 23, 2020 | Suhan S |

ಚಿಕ್ಕಬಳ್ಳಾಪುರ: ಘನತಾಜ್ಯ ನಿರ್ವಹಣಾ ಘಟಕ ಏಕರೂಪದ ಬ್ರ್ಯಾಂಡಿಂಗ್‌ ಲೋಕಾರ್ಪಣೆ ಹಾಗೂ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯನ್ನು ಜಿಲ್ಲಾದ್ಯಂತ ಮಾಡಬೇಕು ಹಾಗೂಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಬಗೆಗಿನ ಸಮಸ್ಯೆಗಳನ್ನು ಆಯಾ ತಾಲೂಕು ಮಟ್ಟದಲ್ಲಿಯೇ ಪರಿಹರಿಸಿ ಕೊಡಲಾಗುತ್ತದೆ ಎಂದು ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ(ಚಿನ್ನಿ) ತಿಳಿಸಿದರು.

Advertisement

ಜಿಪಂ ಸಭಾಂಗಣದಲ್ಲಿ ಘನತಾಜ್ಯ ನಿರ್ವಹಣಾಘಟಕ ಏಕರೂಪದ ಬ್ರ್ಯಾಂಡಿಂಗ್‌ ಲೋಕಾರ್ಪಣೆ ಹಾಗೂ ಸ್ವಚ್ಛೋತ್ಸವ -ನಿತ್ಯೋತ್ಸವ ಮಾಸಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಕ್ಟೋಬರ್‌- 2020 ಮಹಾತ್ಮ ಗಾಂಧೀಜಿ ಯವರ 150ನೇ ಜನ್ಮದಿನದ ಪ್ರಯುಕ್ತ ಸ್ವಚ್ಛ ಭಾರತ ಹಾಗೂ ಗ್ರಾಮ ಅಭಿವೃದ್ಧಿ ನಿರ್ಮಾಣ ಮಾಡುವುದರಿಂದ ಜಿಲ್ಲೆಯ ಜನತೆಯಲ್ಲಿ ಘನಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಬಗ್ಗೆ  ಅರಿವು ಮೂಡಿಸುವುದು ಅವಶ್ಯ ಎಂದರು.

ಪಟ್ಟಣವಲ್ಲದೇ ಗ್ರಾಮಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂಬ ಆಶಯದಂತೆ ಸಾಮೂಹಿಕ ಶೌಚಾಲಯಗಳ ನಿರ್ಮಾಣ ಸೇರಿದಂತೆ ಸ್ವತ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕೆಂದರು.

ಕಿರುಚಿತ್ರ ಪ್ರದರ್ಶಿಸಿ: ಸ್ಥಳೀಯ ಮಾಧ್ಯಮಗಳಲ್ಲಿ ಜಾಹೀರಾತು ನೀಡುವ ಹಾಗೂ ಬೀದಿ ನಾಟಕಗಳು ಹಳ್ಳಿಗರಲ್ಲಿ ಹೆಚ್ಚಿನ ಪ್ರಭಾವ ಬೀರುವುದರಿಂದ ಆಯಾ ತಾಲೂಕಿನ ಪ್ರತಿಭಾವಂತ ನಾಟಕಕಾರರಿಗೆ ಪ್ರೋತ್ಸಾಹಧನ ನೀಡಿ ಈ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸಲು ತಿಳಿಸಿ ಮತ್ತು ಕಿರುಚಿತ್ರಗಳ ಪ್ರದರ್ಶನ ಮಾಡಿ ಎಂದು ಸಲಹೆ ನೀಡಿದರು.

Advertisement

ಜಿಪಂ ಉಪಕಾರ್ಯದರ್ಶಿ ಡಾ.ಎನ್‌ .ನೋಮೇಶ್‌ ಕುಮಾರ್‌, ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್‌ ಹಾಗೂ ಜಿಲ್ಲೆಯ ಎಲ್ಲಾ ಕಾರ್ಯನಿರ್ವಹಕಾಧಿಕಾರಿಗಳು, ಪಿಡಿಒಗಳು ಸೇರಿದಂತೆ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next