Advertisement

ನಗರ ಸ್ವಚ್ಛತೆಗೆ ಆದ್ಯತೆ ನೀಡಿ: ಡಾ|ರಾಗಪ್ರಿಯಾ

11:07 AM Feb 25, 2022 | Team Udayavani |

ಯಾದಗಿರಿ: ಅಧಿಕಾರಿಗಳು ನಗರದ ಪ್ರತಿಯೊಂದು ವಾರ್ಡ್‌ಗಳಿಗೆ ಭೇಟಿ ನೀಡಿ, ಘನತ್ಯಾಜ್ಯ ವಿಂಗಡಣೆ ಸಮರ್ಪಕವಾಗಿ ನಿರ್ವಹಿಸಿ ನಗರ ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ವಿವಿಧ ಯೋಜನೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳು ಈಗಾಗಲೇ ಅಸ್ತಿತ್ವದಲ್ಲಿರುವ ಸಮುದಾಯ ಶೌಚಾಲಯಗಳನ್ನು ರಿಪೇರಿ ಮಾಡಿಸಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು. ತಿಂಗಳೊಳಗಾಗಿ ಪ್ರಗತಿ ವರದಿ ನೀಡಬೇಕು. ಹಾಗೆಯೇ ವೈಯಕ್ತಿಕ ಶೌಚಾಲಯ ನಿರ್ಮಿಸುವಲ್ಲಿ ಗಮನಹರಿಸಲು ನಿರ್ದೇಶನ ನೀಡಿದರು.

ಮನೆ-ಮನೆ ಕಸ ಸಂಗ್ರಹಣೆ ಮತ್ತು ಮೂಲದಲ್ಲೇ ತ್ಯಾಜ್ಯ ವಿಂಗಡಣೆ ತಮ್ಮ ತಮ್ಮ ನಗರದ ಎಲ್ಲ ವಾರ್ಡ್‍ಗಳಲ್ಲಿ ಜಾರಿಗೆ ತರಬೇಕು. ನಗರ ಸ್ಥಳೀಯ ಸಂಸ್ಥೆಗಳ ಘನತ್ಯಾಜ್ಯ ವಿಲೇವಾರಿ (ಎಸ್‌ ಡಬ್ಲ್ಯೂಎಂ) ಘಟಕದಡಿ ಮಂಜೂರಾದ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಕೂಡಲೇ ಪೂರ್ಣಗೊಳಿಸಬೇಕು. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ನಿಗದಿತ ಗುರಿಗೆ ಅನುಗುಣವಾಗಿ ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಮನೆಗಳನ್ನು ಸಂಬಂಧಿಸಿದ ಸಿಬ್ಬಂದಿ ಕೂಡಲೇ ಜಿಪಿಎಸ್‌ ಮಾಡಬೇಕೆಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಾಗಿ ಸೂಚಿಸಿದರು.

ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಆಸ್ತಿಕರ, ನೀರಿನ ಕರ, ಜಾಹೀರಾತು ಕರ, ವಾಣಿಜ್ಯ ಮಳಿಗೆಗಳ ಬಾಡಿಗೆ ವಸೂಲಾತಿ, ತೆರಿಗೆ ಸಂಗ್ರಹಕ್ಕೆ ಒತ್ತು ನೀಡಿ ಆರ್ಥಿಕ ಸದೃಢತೆ ಹೊಂದಬೇಕು. ವ್ಯಕ್ತಿಗತ ಯೋಜನೆಯಡಿ ನಿಗದಿಪಡಿಸಿದ ಅನುದಾನ ಕೂಡಲೇ ನಿಯಮಾನುಸಾರ ಕ್ರಮ ಜರುಗಿಸಿ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ಪ್ರತಿಯೊಂದು ಅರ್ಜಿಗಳನ್ನು ಸಕಾಲ ಸೇವೆಯಡಿ ಸ್ವೀಕರಿಸಿ ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಿ ಒಂದು ವೇಳೆ ಪ್ರಗತಿ ಕುಂಠಿತವಾದರೆ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

Advertisement

ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್‌, ಪೌರಾಯುಕ್ತ ಬಕ್ಕಪ್ಪ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿ ಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next