ದೇವನಹಳ್ಳಿ: ಜಿಲ್ಲೆಯಲ್ಲಿ ನೀರಿನ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಬಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 1ನೇ ತ್ರೆ„ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೆಬ್ಟಾಳ-ನಾಗವಾರ ವ್ಯಾಲಿಯಲ್ಲಿನ ತ್ಯಾಜ್ಯ ನೀರನ್ನು ಸಂಸ್ಕರಿಸಿ ಜಿಲ್ಲೆಯ ಕೆರೆಗಳಿಗೆ ತುಂಬಿಸಲಾಗುತ್ತಿದ್ದು, ಸಂಸ್ಕರಿಸಿ ಕೆರೆಗಳಿಗೆ ಹರಿಸುತ್ತಿರುವ ನೀರನ್ನು ಉಪಯೋಗಿಸುವ ಬಗ್ಗೆ ರೈತರಲ್ಲಿ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಸಚಿವರು ತಿಳಿಸಿದರು. ಈ ಬಾರಿ ರಾಗಿ ಬೆಳೆಯಲು ರೈತರಿಗೆ ಹೆಚ್ಚಿನ ಪೋ›ತ್ಸಾಹ ನೀಡಬೇಕು. ಈಗಾಗಲೇ ರಾಗಿ ಬಿತ್ತನೆ ಕಾರ್ಯ ಆರಂ¸ವಾಗಿದ್ದು, ರಾಗಿ ಬಿತ್ತನೆ ಅವಧಿ ಮುಗಿದ ಸಂದರ್ಭದಲ್ಲಿ ಸಿರಿ ಧಾನ್ಯಕ್ಕೆ ಆದ್ಯತೆ ನೀಡಬೇಕೆಂದರು,
ಸಬೆಗೆ ಮಾಹಿತಿ ನೀಡಿದ ಕೃಷಿ ಇಲಾಖೆಯ ಅಧಿಕಾರಿಗಳು, ಈಗಾಗಲೇ ಜಿಲ್ಲೆಯಲ್ಲಿ 26 ಸಾವಿರ ಎಕರೆ ರಾಗಿ ಬಿತ್ತನೆ ಕಾರ್ಯವಾಗಿದೆ. ಖಾಲಿ ಇರುವ ಕಡೆ ರಾಗಿ ಬಿತ್ತನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 4400 ಹೆಕ್ಟೇರ್ ರಾಗಿ ಪ್ರಾತ್ಯಕ್ಷಿಕೆ ಮತ್ತು 80 ಎಕರೆ ನವಣೆ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ. ಪ್ರತಿ ಪಲನು¸ವಿ ರೈತರಿಗೆ ರಾಗಿ ಪ್ರಾತ್ಯಕ್ಷಿಕೆಗಾಗಿ 1,500 ಪೋ›ತ್ಸಾಹ ಧನ ಹಾಗೂ ನವಣೆ ಪ್ರಾತ್ಯಕ್ಷಿಕೆಗಾಗಿ ರೂ. 2,500/- ಪೋ›ತ್ಸಾಹ ಧನ ನೀಡಲಾಗುತ್ತಿದೆ.
ರೈತರಿಗೆ ರಾಗಿ ಕೂರಿಗೆ ಬಿತ್ತನೆ ಹಾಗೂ ರಾಗಿ ಕಟಾವು ಯಂತ್ರ ಬಳಕೆಗಾಗಿ ಪ್ರತಿ ಪಲಾನು¸ವಿ ರೈತನಿಗೆ ಗರಿಷ್ಟ 2 ಹೆಕ್ಟೇರ್‌ಗೆ ಸೀಮಿತವಾಗುವಂತೆ ರೂ.1500/- ರಂತೆ ಉತ್ತೇಜನೆ ನೇರ ನಗದು ಮುಖಾಂತರ ನೀಡಲಾಗುವುದು ಎಂದರು. ಅಪರ ಜಿಲ್ಲಾಧಿಕಾರಿ ಎ.ಎಂ.ಯೋಗಿಶ್ ಮಾತನಾಡಿ 2016 ರ ಮುಂಗಾರು ಹಂಗಾಮಿನ ಕೃಷಿ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈ ವರೆಗೂ ಒಟ್ಟು 36,777 ರೈತರಿಗೆ ರೂ.17.17 ಕೋಟಿ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಮಾಡಲಾಗಿದೆ ಎಂದರು.
ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕುರಿತು ಮಾಹಿತಿ ಪಡೆದ ಸಚಿವರು, ಈಗಾಗಲೇ ಕೊರೆಯಲಾಗಿದ್ದ ಬೋರ್‌ವೆಲ್‌ಗಳು ಡೆಡ್ ಆಗಿದ್ದರೆ, ಅವುಗಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕೆಂದರು. ನೆಲಮಂಗಲ ಆಸ್ಪ$ತ್ರೆಗೆ ನೀರಿನ ಅಬಾವ ಇರುವುದರಿಂದ ಹೆಚ್ಚು ನೀರು ಶೇಖರಿಸುವಂತಹ ತೊಟ್ಟಿ ನಿರ್ಮಿಸಿಕೊಂಡು ರೋಗಿಗಳಿಗೆ ತೊಂದರೆಯಾಗದಂತೆ ಈ ಕೂಡಲೇ ನೀರಿನ ವ್ಯವಸ್ಥೆ ಕಲ್ಪಿ$ಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯ ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವರು, ಜನಪ್ರತಿನಿಧಿಗಳ ಆಹ್ವಾನಿಸಿದೆ ಇಲಾಖೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದ ಸಚಿವರು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲಿಸಿದ ನಂತರ ಅಧಿಕಾರಿಗಳು ಹೆಚ್ಚಿನ ಆಸಕ್ತಿವಹಿಸಿ, ಕೆಲಸ ನಿರ್ವಹಿಸಬೇಕೆಂದರು.
ಸಬೆಯಲ್ಲಿ ಶಾಸಕರುಗಳಾದ ಪಿಳ್ಳ ಮುನಿಶಾಮಪ್ಪ, ಡಾ. ಕೆ.ಶ್ರೀನಿವಾಸಮೂರ್ತಿ, ಎಂ.ಟಿ.ಬಿ.ನಾಗರಾಜು, ವೆಂಕಟರಮಣಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಉಪಾಧ್ಯಕ್ಷ ಅನಂತಕುಮಾರಿ, ಜಿಲ್ಲಾಧಿಕಾರಿ ಎಸ್.ಪಾಲಯ್ಯ, ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ದಯಾನಂದ್, ಜಿಲ್ಲಾ ಪಂಚಾಯತ್ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.