ಬಾಗೇಪಲ್ಲಿ: ಕುಡಿಯುವ ನೀರು, ರಸ್ತೆ, ಚರಂಡಿ ಸೇರಿ ಮೂಲ ಸೌಲಭ್ಯ ಒದಗಿಸುವ ಮೂಲಕ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕ ಎಸ್.ಎನ್.ಸುಬ್ಟಾರೆಡ್ಡಿ ತಿಳಿಸಿದರು.
ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ, ಸಾರ್ವಜನಿಕರ ಸಮಸ್ಯೆ ಆಲಿಸಿ ಅದಕ್ಕೆ ಸಂಬಂಧಪಟ್ಟಂತೆ ಪರಿಹಾರಕ್ಕಾಗಿ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ 6 ವಾರ್ಡ್‌ಗಳಲ್ಲಿ ಸಂಚರಿಸಿದ ಶಾಸಕರಿಗೆ ಸಾರ್ವಜನಿಕರಿಂದ ಮನೆ, ನಿವೇಶನ, ರಸ್ತೆ, ಬೀದಿ ದೀಪ, ಕುಡಿಯುವ ನೀರು, ಮೂಲ ಸಮಸ್ಯೆಗಳ ದೂರಿನ ಸುರಿಮಳೆಯ ದರ್ಶನವಾಯಿತು.
ವಿವಿಧ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿದ ಶಾಸಕರು, ಪಟ್ಟಣದ ಹಲವು ವಾರ್ಡ್‌ಗಳಲ್ಲಿನ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಮಾಡುವಂತೆ ಸ್ಥಳದಲ್ಲಿಯೇ ಉಪಸ್ಥಿತರಿದ್ದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ಸ್ವತ್ಛತೆಗೆ ಮೊದಲ ಆದ್ಯತೆ ನೀಡುವುದಲ್ಲದೆ, ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ ಸೇರಿ ಮೂಲ ಸೌಲಭ್ಯ ಒದಗಿಸುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಪುರಸಭೆ ಅಧ್ಯಕ್ಷೆ ರೇಷ್ಮಾಬಾನು, ಉಪಾಧ್ಯಕ್ಷ ಎ.ಶ್ರೀನಿವಾಸ್, ಸ್ಥಾಯಿ ಸಮಿತಿ ಅಧ್ಯಕ್ಷ ಎ.ನಂಜುಂಡಪ್ಪ, ಸದಸ್ಯರಾದ ಶ್ರೀನಿವಾಸರೆಡ್ಡಿ, ಅಶೋಕರೆಡ್ಡಿ, ಜಬೀವುಲ್ಲಾ, ಶಬಾನಾ ಪರ್ವಿನ್, ಪದ್ಮಾ ಮಲ್ಲೇಶ್, ಮುಖ್ಯಾಧಿಕಾರಿ ಕೆ.ಮಧುಕರ್, ಪರಿಸರ ಅಭಿಯಂತರ ನಮಸ್ಕೃತ ಮತ್ತಿತರರು ಇದ್ದರು.