Advertisement
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 32 ಹಾಸಿಗೆಗಳ ಐಸಿಯುವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಆರೋಗ್ಯದತ್ತ ಗಮನ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ವಾತ್ಸಲ್ಯ ಯೋಜನೆಯನ್ನು ಎಲ್ಲ ಜಿಲ್ಲೆಗಳಿಗೆ ವಿಸ್ತರಿಸುತ್ತೇವೆ ಎಂದರು.
Related Articles
Advertisement
ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿರಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ರಾಜ್ಯಾದ್ಯಂತ ವೆಂಟಿಲೇಟರ್, ಐಸಿಯು, ಆಮ್ಲಜನಕಯುಕ್ತ ಹಾಸಿಗೆ ಹೆಚ್ಚಿಸಲಾಗುವುದು ಎಂದರು.
ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದವರಿಗೂ ಸೋಂಕು ಬಾಧಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ಡಾ| ಕೆ. ಸುಧಾಕರ್, ಎರಡೂ ಡೋಸ್ ಲಸಿಕೆ ಪಡೆದವರಿಗೆ ಸೋಂಕು ತಗಲಿರುವ ಸಂಖ್ಯೆ ವಿರಳ. ತಗಲಿದರೂ ತೀವ್ರತೆ ಕಡಿಮೆ ಇರುತ್ತದೆ ಎಂದರು.
ಪರ್ಯಾಯ ದಿನಗಳಲ್ಲಿ ತರಗತಿ:
9ನೇ ತರಗತಿಯಿಂದ ಪಿಯುಸಿಯ ವರೆಗೆ ದಿನ ಬಿಟ್ಟು ದಿನ ಶಾಲೆ, ಕಾಲೇಜು ತೆರೆಯುವ ಬಗ್ಗೆ ಚಿಂತನೆ ಮಾಡಲಾಗಿದೆ. ಇದರ ಪ್ರಗತಿಯನ್ನು ನೋಡಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.