ದೇವನಹಳ್ಳಿ: ವಿದ್ಯಾರ್ಥಿಗಳಿಗೆ ನೀಡಿರುವ ಸೈಕಲ್‌ಗಳು ವಿದ್ಯಾಭ್ಯಾಸಕ್ಕಾಗಿ ಮಾತ್ರ ಬಳಕೆಯಾಗಬೇಕು. ಸರ್ಕಾರದಿಂದ ಸಿಗುವ ಸೌಲಭ್ಯ ಬಳಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತಿ ಸಾಧಿಸಬೇಕು ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಬಚ್ಚಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕುಂದಾಣ ಹೋಬಳಿ ಸೈಕಲ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಪ್ರಗತಿಗೆ ಮತ್ತು ವಿದ್ಯಾಭ್ಯಾಸದ ಅನುಕೂಲಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ನೀಡಲಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ನೀಡಿದ ಸರ್ಕಾರಿ ಸೈಕಲ್‌ಗಳನ್ನು ಗೃಹೋಪಯೋಗಕ್ಕೆ ಬಳಸಬಾರದು ಎಂದರು.
ಎಲ್ಲಾ ರೀತಿಯಲ್ಲಿ ಬಚ್ಚಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ವ್ಯಾಪ್ತಿಗೆ ಸೇರಿರುವ 4 ಎಕರೆ 39 ಕುಂಟೆ ಜಾಗವನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಕುಂದಾಣ ಹೋಬಳಿ ಬಹಳಷ್ಟು ಹಿಂದುಳಿದಿರುವುದರಿಂದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಬಸ್ ಸೌಕರ್ಯ, ಕುಡಿಯುವ ನೀರಿಗೆ ಹಾಗೂ ಮೂಲ ಸೌಕರ್ಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.
ಗ್ರಾಪಂ ಸದಸ್ಯ ಬಿ.ಕೆ.ನಾರಾಯಣಸ್ವಾಮಿ ಮಾತನಾಡಿ, ಬಚ್ಚಹಳ್ಳಿ ಸರ್ಕಾರಿ ಶಾಲೆ ಪ್ರಾರಂಭವಾಗಿದಾಗಿನಿಂದಲೂ ಎಸ್‌ಎಸ್‌ಎಲ್‌ಸಿಯಲ್ಲಿ ಸತತವಾಗಿ ಶೇ.100ರಷ್ಟು ಫಲಿತಾಂಶ ಸಾಧಿಸಿದೆ. ಇನ್ನೂ ಹೆಚ್ಚಿನ ಸಾಧನೆಗೆ ಶಾಸಕರು ಹಾಗೂ ಜನಪ್ರತಿನಿಧಿಗಳ ಸಹಕಾರ ಬೇಕು. ವಿವಿಧ ಬೇಡಿಕೆಗಳ ಮನವಿಯೊಂದಿಗೆ ಬಚ್ಚಹಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ಪದವಿ ಪೂರ್ವ ಕಾಲೇಜು ನಿರ್ಮಿಸಿಕೊಡಬೇಕು. ಸುತ್ತಲಿನ ಹೆಣ್ಣು ಮಕ್ಕಳಿಗೆ ಸಹಾಯವಾಗುತ್ತದೆ ಎಂದು ಶಾಸಕರಿಗೆ ಮನವಿ ಮಾಡಿದರು.
ಜಿಪಂ ಸದಸ್ಯ ಕೆ.ಸಿ.ಮಂಜುನಾಥ್, ಜೆಡಿಎಸ್ ಕಾರ್ಯಾಧ್ಯಕ್ಷ ಮುನೇಗೌಡ, ತಾಪಂ ಸದಸ್ಯ ಎಸ್.ಮಹೇಶ್, ಗೋಪಾಲಸ್ವಾಮಿ, ಕುಂದಾಣ ಗ್ರಾಪಂ ಅಧ್ಯಕ್ಷೆ ವಿಜಯ, ಸದಸ್ಯರಾದ ಎಸ್.ಕೆ.ಆನಂದ್, ಬಿಇಒ ಗಾಯಿತ್ರಿ ದೇವಿ, ಕಾರಹಳ್ಳಿ ಗ್ರಾಪಂ ಅಧ್ಯಕ್ಷ ದೇವರಾಜ್, ಎಪಿಎಂಸಿ ಅಧ್ಯಕ್ಷ ಕೆ.ವಿ.ಮಂಜುನಾಥ್, ಆಲೂರು ದುದ್ದನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ಪಿಳ್ಳಮ್ಮ, ಜೆಡಿಎಸ್ ಕುಂದಾಣ ಹೋಬಳಿ ಅಧ್ಯಕ್ಷ ಚಂದ್ರೇಗೌಡ,
ಎಸ್‌ಡಿಎಂಸಿ ಸದಸ್ಯ ಆನಂದ್, ಮುನಿಯಪ್ಪ, ಮುಖಂಡರಾದ ನಂಜೇಗೌಡ, ರಂಗಸ್ವಾಮಿ, ವಿಶ್ವನಾಥಪುರ ಪಂಚಾಯಿತಿಯ ಜಗದೀಶ್, ಎಂಪಿಸಿಎಸ್ ಅಧ್ಯಕ್ಷ ಮುನಿರಾಜು, ಹಿಂದುಳಿದ ವರ್ಗಗಳ ಮುಖಂಡ ಲಕ್ಷ್ಮೀಶ, ಶಾಲೆ ಮುಖ್ಯ ಶಿಕ್ಷಕ ಮುರಳಿ ಹಾಗೂ ಕುಂದಾಣ ಹೋಬಳಿಯ 12 ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಇದ್ದರು.