ಹೊಳಲ್ಕೆರೆ: ಕ್ಷೇತ್ರದ ಅಭಿವೃದ್ಧಿಗೆ 1200 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಪ್ರತಿಯೊಂದು ಗ್ರಾಮದ ಅಭಿವೃದ್ಧಿಗೂ ಸುಮಾರು 1 ಕೋಟಿ ತನಕ ಅನುದಾನ ನೀಡಲಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ತಾಲೂಕಿನ ಚಿಕ್ಕನಕಟ್ಟೆಯ ಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿರುವ ಹಿರೆಹಳ್ಳಕ್ಕೆ 2.25 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಹಾಗೂ ಬ್ಯಾರೇಜ್ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಿಡುಗಡೆಯಾಗಿರುವ ಅನುದಾನದಲ್ಲಿ ರಸ್ತೆ, ಕೆರೆಗಳ ಅಭಿವೃದ್ಧಿ, ಶಾಲೆ-ಕಾಲೇಜು ಕಟ್ಟಡ, ಸಮುದಾಯ ಭವನಗಳ ನಿರ್ಮಾಣ, ಗ್ರಾಮೀಣ ಪ್ರದೇಶದಲ್ಲಿರುವ ರಸ್ತೆಗಳಿಗೆ ಲಿಂಕ್ ರಸ್ತೆಗಳ ನಿರ್ಮಾಣ, ಹೊಸ ಕೆರೆ, ಚೆಕ್‌ಡ್ಯಾಮ್ ನಿರ್ಮಾಣ, ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ, ರಸ್ತೆಗಳ ಅಗಲೀಕರಣ ಸೇರಿದಂತೆ ಹಲವಾರು ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ಪ್ರತಿಯೊಂದು ಹಳ್ಳಿಗೂ ಏನೆಲ್ಲ ಕಾರ್ಯಕ್ರಮ ಕೈಗೊಳ್ಳಬೇಕೆಂದು ನಿತ್ಯ ಚಿಂತನೆ ಮಾಡಿ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆದುಕೊಳ್ಳುತ್ತಿದ್ದೇನೆ. ಜನರು ಕೆಲಸ ಮಾಡಿಸಿ ಎನ್ನುವ ಮೊದಲೇ ಅಭಿವೃದ್ಧಿ ಕಾರ್ಯ ಮಾಡಿಸಿಕೊಡುತ್ತಿರುವುದಾಗಿ ತಿಳಿಸಿದರು. ಜಿಪಂ ಸದಸ್ಯ ಎಂ.ಬಿ. ತಿಪ್ಪೇಸ್ವಾಮಿ, ಗ್ರಾಪಂ ಅಧ್ಯಕ್ಷ ಈಶ್ವರಪ್ಪ ಇದ್ದರು.