Advertisement

Karnataka: ಕಾನೂನು ಮಾಪನಶಾಸ್ತ್ರ ಇಲಾಖೆ ಬಲವರ್ಧನೆಗೆ ಆದ್ಯತೆ: ಸಚಿವ ಮುನಿಯಪ್ಪ

12:49 AM Sep 14, 2023 | Team Udayavani |

ಬೆಂಗಳೂರು: ಹಲವು ಸಮಸ್ಯೆಗಳಿಂದ ಬಳಲುತ್ತಿರುವ ಕಾನೂನು ಮಾಪನಶಾಸ್ತ್ರ ಇಲಾಖೆಯನ್ನು ಬಲವರ್ಧನೆಗೊಳಿಸಿ, ಆಮೂಲಾಗ್ರ ಬದಲಾವಣೆಗಳೊಂದಿಗೆ ಪುನರ್‌ರಚಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು.

Advertisement

ಇಲಾಖೆಯಲ್ಲಿ 500 ಹುದ್ದೆಗಳ ಪೈಕಿ ಕೇವಲ 200 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಸಮರ್ಪಕ ಲ್ಯಾಪ್‌ಟಾಪ್‌, ವಾಹನಗಳಿಲ್ಲ. ಕಚೇರಿಗಳಿಗೆ ಸ್ವಂತ ಕಟ್ಟಡಗಳಿಲ್ಲ. ಈ ಇಲ್ಲಗಳ ನಡುವೆ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ, ಬಲವರ್ಧನೆಗೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇಲಾಖೆ ಪುನರ್‌ರಚಿಸಲಾಗುವುದು ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವಿಕಾಸಸೌಧದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಅನಂತರ ಮಾತನಾಡಿದ ಅವರು, ಕಾನೂನು ಮಾಪನಶಾಸ್ತ್ರ ಇಲಾಖೆಯಲ್ಲಿ ಒಟ್ಟು 500 ಹು¨ªೆಗಳಲ್ಲಿ 200 ಜನ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಖಾಲಿ ಇರುವ 300 ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅಥವಾ ಕರ್ನಾಟಕ ಪರೀûಾ ಪ್ರಾಧಿಕಾರ (ಕೆಇಎ)ದ ಮೂಲಕ ತಿಂಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಸಿಬಂದಿಗೆ ನಿಯಮಾನುಸಾರ ಭಡ್ತಿ ನೀಡಲಾಗುವುದು ಎಂದರು.

500 ಕೋಟಿ ರೂ. ಸಂಗ್ರಹ ಗುರಿ
ಕಾನೂನು ಮಾಪನಶಾಸ್ತ್ರ ಇಲಾಖೆ ಮೂಲಕ ನೂರು ಕೋಟಿ ರೂ. ರಾಜಸ್ವ ಸಂಗ್ರಹಿಸಲಾಗುತ್ತಿದೆ. ಪ್ರಸಕ್ತ ವರ್ಷ 500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ ಎಂದು ಸಚಿವ ಮುನಿಯಪ್ಪ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next