Advertisement

ಜಿಲ್ಲೆಯಲ್ಲಿ ಜಲಮೂಲಗಳ ಪುನಶ್ಚೇತನಕ್ಕೆ ಆದ್ಯತೆ

08:51 PM Jan 31, 2020 | Lakshmi GovindaRaj |

ಕೊಳ್ಳೇಗಾಲ: ಜಿಲ್ಲೆಯಲ್ಲಿ ಜಲಮೂಲಗಳ ಪುನಶ್ಚೇತನ 100 ಕಾರ್ಯಾಗಾರವನ್ನು ನಡೆಸುವ ಉದ್ದೇಶ ಹೊಂದಿರುವುದಾಗಿ ಜಿಪಂ ಸಿಇಒ ನಾರಾಯಣರಾವ್‌ ಹೇಳಿದರು. ತಾಲೂಕಿನ ಕುಂತೂರು ಗ್ರಾಮದಲ್ಲಿ ಎಲ್ಲಾ ಪಿಡಿಒಗಳಿಗಾಗಿ ಏರ್ಪಡಿಸಿದ್ದ ಜಲಮೂಲಗಳ ಪುನಶ್ಚೇತನ ಕಾರ್ಯಾಗಾರದಲ್ಲಿ ಮಾತನಾಡಿ, ನೀರನ್ನು ಮಿತವಾಗಿ ಬಳಸಬೇಕು.

Advertisement

ಮತ್ತು ನೀರು ಪೋಲಾಗದಂತೆ ಎಲ್ಲಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು. ಗ್ರಾಪಂನ ವ್ಯಾಪ್ತಿಯಲ್ಲಿ ನೀರಿನ ಅಂತರ್ಜಲ ಹೆಚ್ಚಿಸುವ ಸಲುವಾಗಿ 10*10 ಗುಂಡಿ ತೆಗೆದು ಅದರಲ್ಲಿ 40 ಎಂ.ಎಂ. ಕಲ್ಲು, 20 ಎಂ.ಎಂ. ಜಲ್ಲಿಕಲ್ಲು, ಇದ್ದಿಲು ನಂತರ ಎಂ.ಸ್ಯಾಂಡ್‌ನಿಂದ ಮುಚ್ಚಿ ಪಕ್ಕದಲ್ಲಿ ಚೆಕ್‌ಡ್ಯಾಮ್‌ ನಿರ್ಮಾಣ ಮಾಡಿ, ನೀರು ತುಂಬಿಸಿದರೆ ಅಂತರ್ಜಲ ವೃದ್ಧಿಯಾಗಿ, ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ತಾಲೂಕಿನ ಕುಂತೂರು ಗ್ರಾಪಂನಲ್ಲಿ ನೀರಿನ ಸಮಸ್ಯೆ ತಾಂಡವಾಡುತ್ತಿರುವ ಬಗ್ಗೆ ಪಿಡಿಒ ಅವರು ದೂರು ನೀಡಿದ ಮೇರೆಗೆ ಗ್ರಾಪಂ ಆಯ್ಕೆ ಮಾಡಿದೆ. ಇದಕ್ಕೆ ಬೇಕಾದ ತಜ್ಞರಿಂದ ಎಲ್ಲಾ ಮಾಹಿತಿ ಪಡೆದು ತಾಲೂಕಿನ ಎಲ್ಲಾ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣ ಮಾಡಬೇಕು ಎಂದು ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರ ನೂತನ ಯೋಜನೆ ಜಾರಿಗೆ ತಂದಿದೆ. ಇದನ್ನು ಜಿಲ್ಲೆಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌ ಮತ್ತು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಸೂಚನೆ ಮೇರೆಗೆ ಈ ಕೆಲಸವನ್ನು ಕೈಗೆತ್ತಿಕೊಂಡಿದ್ದು, ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಹೆಚ್ಚಿಸಬೇಕು ಎಂದರು. ಈ ವೇಳೆ ಗ್ರಾಪಂ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ಕುಮಾರಸ್ವಾಮಿ, ಪಿಡಿಒ ಶೋಭರಾಣಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next