Advertisement

Armed Forces ಗಳಲ್ಲಿ ಮಹಿಳೆಯರಿಗೆ ಆದ್ಯತೆ: ನೌಕಾಪಡೆ ದಿನಾಚರಣೆಯಲ್ಲಿ ಪ್ರಧಾನಿ ಮೋದಿ

12:31 AM Dec 05, 2023 | Team Udayavani |

ಮುಂಬಯಿ: ಸಶಸ್ತ್ರಪಡೆಗಳಲ್ಲಿ ಮಹಿಳಾ ಸಿಬಂದಿಯ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

Advertisement

ಮಹಾರಾಷ್ಟ್ರದ ಕರಾವಳಿ ಪ್ರದೇಶವಾದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದ ನೌಕಾಪಡೆ ದಿನಾಚರಣೆಯಲ್ಲಿ ಪ್ರಧಾನಿ ಭಾಗಿಯಾಗಿ ಮಾತನಾಡಿದರು. ಈ ವೇಳೆ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸಲು ನಮ್ಮ ಸರಕಾರ ಒತ್ತು ನೀಡುತ್ತಿದೆ ಎಂದಿದ್ದಾರೆ. ಅಲ್ಲದೇ, ಭಾರತ ಇದೀಗ ತನ್ನ ಮುಂದೆ ಬಹುದೊಡ್ಡ ಗುರಿಗಳನ್ನು ಹೊಂದಿದ್ದು ಆ ಗುರಿ ಸಾಧಿಸಲು ತನ್ನೆಲ್ಲ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ. ವಿಶೇಷವಾಗಿ ಬಂದರು ಅಭಿವೃದ್ಧಿಯಂಥ ಕಾರ್ಯಗಳನ್ನು ದೇಶ ಪ್ರೋತ್ಸಾಹಿಸುತ್ತಿದ್ದು, ಮರ್ಚೆಂಟ್‌ ಶಿಪ್ಪಿಂಗ್‌ಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಒಟ್ಟಾರೆ ಭಾರತದ ಸಮುದ್ರ ಸಾಮರ್ಥ್ಯದ ಸಮರ್ಪಕ ಬಳಕೆಯಾಗುತ್ತಿದೆ ಎಂದಿದ್ದಾರೆ. ಇದೇ ವೇಳೆ ಭಾರತೀಯ ನೌಕಾಪಡೆಯ ಶ್ರೇಣಿಗಳನ್ನು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಮರುನಾಮಕರಣ ಮಾಡಲಾಗುತ್ತದೆ ಎಂದೂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next