Advertisement

“ವಿದ್ಯಾರ್ಥಿಗಳ ಸುರಕ್ಷೆಗೆ ಆದ್ಯತೆ’

12:28 AM Jun 12, 2020 | Team Udayavani |

ಉಡುಪಿ: ಲಾಕ್‌ಡೌನ್‌ ಕಾರಣದಿಂದ ಬಾಕಿಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂ. 18ರಂದು ನಡೆಯಲಿದ್ದು, ಜಿಲ್ಲೆಯ ಎಲ್ಲ ಪರೀಕ್ಷಾ ಕೆಂದ್ರಗಳಲ್ಲಿ ವಿದ್ಯಾರ್ಥಿಗಳ ಸುರಕ್ಷೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

Advertisement

ಪರೀಕ್ಷೆ ನಡೆಸುವ ಕುರಿತು ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಹೆಚ್ಚುವರಿಯಾಗಿ 2 ಬ್ಲಾಕ್‌ಗಳನ್ನು ಗುರುತಿಸಲಾಗಿದೆ. 13,547 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಹೊರ ಜಿಲ್ಲೆಗಳಿಂದ 160 ಮತ್ತು ಹೊರ ರಾಜ್ಯದಿಂದ ಓರ್ವ ವಿದ್ಯಾರ್ಥಿ ಆಗಮಿಸಲಿದ್ದಾರೆ. ಜಿಲ್ಲೆಯ 1,344 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದಾರೆ. ಪ್ರತೀ ಕೇಂದ್ರಕ್ಕೆ ವೀಕ್ಷಕರನ್ನು ನೇಮಿಸಲಾಗಿದೆ. ಪೊಲೀಸ್‌ ಭದ್ರತೆ ಒದಗಿಸಲಾಗು ವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಾದರಿಯಾಗೋಣ
ಕಂಟೈನ್‌ಮೆಂಟ್‌ ಪ್ರದೇಶ ಅಥವಾ ಸೀಲ್‌ಡೌನ್‌ ಮನೆಗಳಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಮತಿ ನೀಡುವಂತೆ ಹಾಗೂ ವಾಹನ ವ್ಯವಸ್ಥೆ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಕೋವಿಡ್‌-19 ಸೋಂಕು ತಡೆಯಲು ಸರಕಾರ ಸೂಚಿಸಿರುವ ಮಾರ್ಗಸೂಚಿ ಯನ್ನು ಚಾಚೂ ತಪ್ಪದೆ ಪಾಲಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗುವಂತೆ ಪರೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಭಗವಂತ ಕಟ್ಟಿàಮನಿ, ತಹಶೀಲ್ದಾರ್‌ ಮತ್ತಿತರರಿದ್ದರು.

Advertisement

ಬಸ್‌ ಸೌಲಭ್ಯ
ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಕೆಎಸ್‌ಆರ್‌ಟಿಸಿಯಿಂದ ಉಚಿತ ಬಸ್‌ ವ್ಯವಸ್ಥೆ ಮಾಡ ಲಾಗುತ್ತಿದೆ. ಸ್ವಂತ ವಾಹನದಲ್ಲಿ ಬರುವ ಮತ್ತು ಖಾಸಗಿ ವಾಹನದಲ್ಲಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಮಾಹಿತಿ ಸಂಗ್ರಹಿಸಿ ಅಗತ್ಯವಿರುವೆಡೆಗೆ ಬಸ್‌ ವ್ಯವಸ್ಥೆ ಮಾಡಲು ರೂಟ್‌ ಮ್ಯಾಪ್‌ ಸಿದ್ಧಪಡಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಯಾವೊಬ್ಬ ವಿದ್ಯಾರ್ಥಿಯೂ ಬಸ್‌ ವ್ಯವಸ್ಥೆ ಇಲ್ಲವೆಂದು ಪರೀಕ್ಷೆಗೆ ಗೈರುಹಾಜರಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next