Advertisement
ಸೋಮವಾರ ನಗರದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಹಕಾರಿ ರಂಗದಲ್ಲಿ ಇರುವ ಧುರಿಣರು ದೇಶವನ್ನು ಜಾತಿ, ಮತ, ಪಂಥ, ರಾಜಕೀಯ ರಹಿತವಾಗಿ ಸಹಕಾರಿ ರಂಗವನ್ನು ಬಲವರ್ಧನೆ ಮಾಡುವ ಮೂಲಕ ಸಮಾಹ, ದೇಶವನ್ನು ಕಟ್ಟುವಲ್ಲಿ ಶ್ರಮಿಸಬೇಕು ಎಂದರು.
Related Articles
Advertisement
ಸಹಕಾರಿ ರಂಗದಲ್ಲಿ ದಲಿತ ಸಮುದಾಯದ ಮಹಿಳೆಯರು ಸದಸ್ಯತ್ವ ಪಡೆಯಲು ಮುಂದಾಗಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲು ಉತ್ಪಾದಕ ವ್ಯವಸ್ಥೆ ಬಲವರ್ಧನೆಗೆ ಸರ್ಕಾರ ನೆರವಿಗೆ ನಿಂತಿದೆ. ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಗಾಗಿ ಸರ್ಕಾರ ವಾರ್ಷಿಕ 1200 ಕೋಟಿ ರೂ. ನೆರವು ನೀಡುವ ಮೂಲಕ ಹಾಲು ಉತ್ಪಾದಕರ ಸಂಘಗಳ ಶಕ್ತಿ ತುಂಬುವ ಕೆಲಸ ಮಾಡಿದೆ ಎಂದರು.
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನೀಡುವ ಸಾಲದಲ್ಲಿ ನಬಾರ್ಡ ತನ್ನ ಪಾಲಿನ ಹಣ ನೀಡುವ ವಿಷಯದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಈ ವಿಷಯವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ವೇದಿಕೆ ಮೇಲಿರುವ ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ ಅವರು ಕೂಡ ನಬಾರ್ಡ ನೆರವಿಗೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಕೃಷಿ ಕ್ಷೇತ್ರಕ್ಕೆ ಬಡ್ಡಿ ರಹಿತ, ಕಡಿಮೆ ಬಡ್ಡಿ ದರಕ್ಕೆ ಜಾತಿನೀಡುವುದರಿಂದ ರೈತರ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದರು.
ಕರ್ನಾಟ ಸೇರಿದಂತೆ ದೇಶದಲ್ಲಿ 12 ರಾಜ್ಯಗಳ ಭೀಕರ ಬರಗಾಲ ಆವರಿಸಿದೆ. ರಾಜ್ಯದಲ್ಲಿ ಆವರಿಸಿರುವ ಬರ ಪರಿಸ್ಥಿತಿ ನಿರ್ವಹಣೆಗೆ 800 ಕೋಟಿ ಹಣವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಿದೆ. ರಾಜ್ಯ ಸರ್ಕಾರ ಬರ ಪರಿಸ್ಥಿತಿ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇದಕ್ಕಾಗಿ ಬರ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.
ಸಮಾರೋಪ ಸಮಾರಂಭ ಆಯೋಜಿರುವ ಆತಿಥ್ಯ ವಹಿಸಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು.
ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ, ಆರ್.ಬಿ. ತಿಮ್ಮಾಪುರ, ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ಸಹಕಾರಿ ರಂಗದ ಹಿರಿಯ ನಾಯಕ ಜಿ.ಟಿ. ದೇವೇಗೌಡ, ವಿಜಯಪುರ, ಬಾಗಲಕೋಟ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳ ಶಾಸಕರು, ಸಹಕಾರಿ ರಂಗದ ಸಾಧಕರು ವೇದಿಕೆ ಮೇಲಿದ್ದರು.
ತಮ್ಮ ಮುಂದೆಯೇವ ತಮ್ಮ ಭಾವಚಿತ್ರ ಬಿಡಿಸಿದ ಕೆಂಚಪ್ಪ ಬಡಿಗೇರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ಚಿತ್ರವನ್ನು ಚನ್ನಾಗಿ ಬಿಡಿಸಿದ್ದಿ ಕಣಯ್ಯ ಎಂದು ಶಾಲು ಹೊದಿಸಿ ಸನ್ಮಾನಿಸಿದರು.