Advertisement

ಖಾಸಗಿ ಶಿಕ್ಷಕರ ಕೊರತೆ ನಿವಾರಿಸಲು ಆದ್ಯತೆ: ನಾಗೇಶ್‌

02:07 AM Nov 03, 2021 | Team Udayavani |

ಬೆಳ್ತಂಗಡಿ: ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿ ಸುವ ವಿಚಾರವಾಗಿ ಆರ್ಥಿಕ ಇಲಾಖೆ ಯೊಂದಿಗೆ ಚರ್ಚಿಸಿ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಭರವಸೆ ನೀಡಿದರು.

Advertisement

ಧರ್ಮಸ್ಥಳಕ್ಕೆ ಮಂಗಳವಾರ ಆಗಮಿಸಿದ ಸಚಿವರು 1ರಿಂದ 5ನೇ ತರಗತಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಚಿಲುಮೆ’ ಮಾದರಿ ತರಗತಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡು ಶುಭ ಹಾರೈಸಿ ಮಾತನಾಡಿದರು.

ಶಿಕ್ಷಕರು ಪ್ರೀತಿ-ವಿಶ್ವಾದಿಂದ ಮಕ್ಕ ಳನ್ನು ಮಾತನಾಡಿಸಿ ಅವರಲ್ಲಿರುವ ಭಯ, ಆತಂಕ ನಿವಾರಿಸಿ ಲವ ಲವಿಕೆಯಿಂದ ಶಾಲೆಗೆ ಬರುವಂತೆ ಪ್ರೇರೇಪಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ಸಂಸ್ಕಾರಯುತ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಸಭ್ಯ, ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದ ಅವರು, ಧರ್ಮಸ್ಥಳವು ದೇಶಕ್ಕೆ ಮಾದರಿಯಾಗಿದ್ದು ಧರ್ಮಾಧಿ ಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ವಿವಿಧ ಕ್ಷೇತ್ರಗಳಲ್ಲಿನ ಸೇವೆ ಶ್ಲಾಘನೀಯ ಎಂದು ಹೇಳಿದರು.

20.70 ಕೋಟಿ ರೂ.
ಪೂರಕ ಅನುದಾನ
ಡಾ| ವೀರೇಂದ್ರ ಹೆಗ್ಗಡೆ ಮಾತನಾಡಿ, ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಧರ್ಮಸ್ಥಳದ ಜ್ಞಾನದೀಪ ಕಾರ್ಯಕ್ರಮದಡಿ ಈ ವರ್ಷ 600 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಧಾರವಾಡ ಜಿಲ್ಲೆಯ 10 ಶಾಲೆಗಳ ಸರ್ವತೋಮುಖ ಪ್ರಗತಿಗೆ ನೆರವು ನೀಡಲಾಗಿದೆ. ಶಾಲೆ ಗಳಿಗೆ ಕಟ್ಟಡ, ಶೌಚಾಲಯ, ಕ್ರೀಡಾ ಸಾಮಗ್ರಿ ಮೊದಲಾದ ಮೂಲ ಸೌಕರ್ಯಒದಗಿಸಲು ಈ ವರೆಗೆ 20.70 ಕೋಟಿ ರೂ. ಪೂರಕ ಅನು ದಾನ ನೀಡ ಲಾಗಿದೆ ಎಂದು ತಿಳಿಸಿದರು.

Advertisement

ಇದನ್ನೂ ಓದಿ:ಲಖೀಂಪುರ ಕಿಸಾನ್‌ ಸ್ಮತಿ ದಿವಸ ಆಚರಿಸುವಂತೆ ಸಮಾಜವಾದಿ ಪಕ್ಷ ಕರೆ

311 ಶಾಲೆಗಳಿಗೆ ಬೆಂಚು-ಡೆಸ್ಕ್
ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ 311 ಶಾಲೆಗಳಿಗೆ 2,370 ಬೆಂಚು-ಡೆಸ್ಕ್ಗಳನ್ನು ಮಂಜೂರು ಮಾಡಿದ್ದು ಸಚಿವ ನಾಗೇಶ್‌ ಪೀಠೊಪಕರಣಗಳನ್ನು ಬಿಡು ಗಡೆಗೊಳಿಸಿ ಶುಭ ಹಾರೈಸಿದರು.

ಶಾಸಕ ಹರೀಶ್‌ ಪೂಂಜ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌, ಮುಖ್ಯನಿರ್ವಹಣಾಧಿಕಾರಿ ಅನಿಲ್‌ ಕುಮಾರ್‌, ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಮತ್ತು ಯೋಜನಾಧಿಕಾರಿ ಪುಷ್ಪರಾಜ್‌, ತಹಶೀಲ್ದಾರ್‌ ಮಹೇಶ್‌ ಜೆ. ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌. ವಿರೂಪಾಕ್ಷಪ್ಪ ಉಪಸ್ಥಿತರಿದ್ದರು.

ನಿವೃತ್ತ ಮುಖ್ಯ ಶಿಕ್ಷಕ ವಸಂತ ಭಟ್‌ ಪ್ರಸ್ತಾವನೆಗೈದರು. ಮುಖ್ಯೋ ಪಾಧ್ಯಾಯ ಸುಬ್ರಹ್ಮಣ್ಯ ರಾವ್‌ ಸ್ವಾಗತಿಸಿದರು. ಶಿಕ್ಷಕಿ ಪೂರ್ಣಿಮಾ ಜೋಶಿ ವಂದಿಸಿದರು. ಮನೋರಮಾ ತೋಳ್ಪಾಡಿತ್ತಾಯ ಕಾರ್ಯಕ್ರಮ ನಿರ್ವಹಿಸಿದರು.ಆರಂಭದಲ್ಲಿ ವಿದ್ಯಾರ್ಥಿಗಳು ಸಚಿವರಿಗೆ ಗುಲಾಬಿ ಹೂ ನೀಡಿ ಗೌರವಿಸಿದರು.

ನಲಿ-ಕಲಿ ಪ್ರಾತ್ಯಕ್ಷಿಕೆಗೆ ಸಚಿವರಿಂದ ಶ್ಲಾಘನೆ
ಶಾಲೆಯಲ್ಲಿ ಆರಂಭಿಸಿದ ಚಿಣ್ಣರ ಚಿಲುಮೆಯ ಮಾದರಿ ತರಗತಿಯನ್ನು ವೀಕ್ಷಿಸಿದರು. ಕನ್ನಡ ಅಕ್ಷರ ಮಾಲೆ, ಇಂಗ್ಲಿಷ್‌ ಅಕ್ಷರಗಳು, ಗ್ರಹಗಳು ಮತ್ತು ನಕ್ಷತ್ರಗಳು, ಗಣಿತದ ಚಿಹ್ನೆಗಳು ಇತ್ಯಾದಿಗಳನ್ನು ಮಕ್ಕಳು ನಲಿ-ಕಲಿ ತಣ್ತೀದಡಿ ಕಲಿಯುವ ಪ್ರಾತ್ಯಕ್ಷಿಕೆಗಳನ್ನು ನೋಡಿ ಶ್ಲಾಘಿಸಿದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next