Advertisement

ಆರೋಗ್ಯ ರಕ್ಷಣೆಗೆ ಪ್ರಾಶಸ್ತ್ಯ ನೀಡಿ: ಮಾಣಿಕ್ಯ

03:59 PM Jun 01, 2017 | Team Udayavani |

ಕಲಬುರಗಿ: ಪ್ರತಿಯೊಬ್ಬ ಮನುಷ್ಯನ ನೆಮ್ಮದಿ ಮತ್ತು ಉತ್ತಮ ಜೀವನಕ್ಕೆ ಆರೋಗ್ಯವೇ ಭಾಗ್ಯವಾಗಿದ್ದು, ಆರೋಗ್ಯ ರಕ್ಷಣೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾ  ಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌. ಆರ್‌. ಮಾಣಿಕ್ಯ ತಿಳಿಸಿದರು. 

Advertisement

ನಗರದಲ್ಲಿ ಆಯೋಜಿಸಿದ ವಿಶ್ವ ತಂಬಾಕು ರಹಿತ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶನದಂತೆ 1988ರ ಮೇ 31ರಿಂದ ಪ್ರತಿ ವರ್ಷ ವಿಶ್ವದ ಎಲ್ಲ ರಾಷ್ಟ್ರಗಳಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ತಿಳಿವಳಿಕೆ ನೀಡುವ ಕಾರ್ಯ ನಡೆದಿದೆ ಎಂದರು. 

ಸಮಾಜದ ಬಹುದೊಡ್ಡ ಆಸ್ತಿಯಾಗಿರುವ ವಿದ್ಯಾರ್ಥಿಗಳು ವಿದ್ಯಾರ್ಜನೆ ಪಡೆಯುವುದರೊಂದಿಗೆ ಯಾವುದೇ ದುಶ್ಚಟಕ್ಕೊಳಗಾಗದೆ ಜೀವನ ಪರ್ಯಂತ ಉತ್ತಮ ದೈಹಿಕ ಮತ್ತು ಮಾನಸಿಕ ಸ್ವಾಸ್ಥ ಕಾಪಾಡಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಆರೋಗ್ಯ ಹಣದಿಂದ ಖರೀದಿಸುವ ವಸ್ತುವಲ್ಲ ಎಂದು ಹೇಳಿದರು. 

ಸಾರ್ವಜನಿಕ ಆಸ್ಪತ್ರೆ ಜಿಲ್ಲಾ ಸರ್ಜನ್‌ ಡಾ| ಬಿ.ಎನ್‌. ಜೋಶಿ ಮಾತನಾಡಿ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಇದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯದಲ್ಲಿ ಸಮಾಜದಲ್ಲಿರುವ ಪ್ರತಿಯೊಬ್ಬರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶಿವರಾಜ ಸಜ್ಜನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. 

ಎಚ್‌ಸಿಜಿ ಆಸ್ಪತ್ರೆಯ ಕ್ಯಾನ್ಸರ್‌ ತಜ್ಞ ಡಾ| ನಂದೀಶಕುಮಾರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕ್ಯಾನ್ಸರ್‌ ರೋಗದಿಂದ ಉಂಟಾಗುವ ದುಷ್ಪರಿಣಾಮ ಮತ್ತು ಕ್ಯಾನ್ಸರ್‌ ರೋಗ ತಡೆಗೆ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ಶಿವಶರಣಪ್ಪ ಭೂಸನೂರ ಸ್ವಾಗತಿಸಿದರು. ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರ್ತಿ ಸುಜಾತಾ ಜೆ. ಪಾಟೀಲ ನಿರೂಪಿಸಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next