Advertisement
ಮಕ್ಕಳ ಕಲಿಕೆಯ ಮಟ್ಟ ಕುರಿತು ಏಕ ಕಾಲದಲ್ಲಿ 40 ಲಕ್ಷ ಮಕ್ಕಳ ಮೌಲ್ಯಮಾಪನ ನಡೆಸಿದ ಏಕೈಕ ರಾಜ್ಯ ನಮ್ಮದು. ಈ ಮೌಲ್ಯಮಾಪನದ ಆಧಾರದಲ್ಲಿ ಸುಮಾರು 12 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ಗುರುತಿಸಿ ಪರಿಹಾರ ಬೋಧನೆಗೆ ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಹೆಚ್ಚಿನ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಮಕ್ಕಳ ಆಲೋಚನಾ ಮತ್ತು ಅನ್ವಯಿಕ ಶಕ್ತಿಯನ್ನು (Higher order thinking) ವೃದ್ಧಿಸುವ ನಿಟ್ಟಿನಲ್ಲಿ ಪರೀಕ್ಷಾ ವಿಧಾನದಲ್ಲಿ ಸೂಕ್ತ ಬದಲಾವಣೆ ತರುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚಿಸಿದರು.
Related Articles
Advertisement
ಪ್ರೌಢ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ, ಒಂದೇ ಮಂಡಳಿಯ ಮೂಲಕ 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚರ್ಚಿಸಿ, ಇದಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಗ್ರಂಥಾಲಯ ಇಲಾಖೆಯಡಿಯಲ್ಲಿ ಡಿಜಿಟಲ್ ಲೈಬ್ರರಿಗಳನ್ನು ಜಿಲ್ಲಾ ಮಟ್ಟದಲ್ಲಿ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಡಾ. ಎಸ್. ಸುಬ್ರಹ್ಮಣ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಇಲಾಖೆಯ ಆಯುಕ್ತ ಡಾ. ಪಿ.ಸಿ. ಜಾಫರ್, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಡಾ. ಎಂ.ಟಿ. ರೆಜು ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.