Advertisement

ಕಾರಾಗೃಹ ಮನಃ ಪರಿವರ್ತನಾ ಕೇಂದ್ರ:ನ್ಯಾ|ಸದಾನಂದಸ್ವಾಮಿ

05:34 PM Jun 23, 2018 | Team Udayavani |

ಹಾವೇರಿ: ಮಹಿಳಾ ಕೈದಿಗಳು ತಮ್ಮ ಹಾಗೂ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಇರುವ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷ ಕೆ.ಸಿ. ಸದಾನಂದಸ್ವಾಮಿ ಹೇಳಿದರು.

Advertisement

ತಾಲೂಕಿನ ಕೆರಿಮತ್ತಿಹಳ್ಳಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮಹಿಳಾ ಕೈದಿಗಳು ಮತ್ತು ಅವರೊಂದಿಗಿರುವ ಮಕ್ಕಳಿಗೆ ಕಾನೂನು ಸೇವೆಗಳನ್ನು ನೀಡಲು ಹಮ್ಮಿಕೊಂಡಿದ್ದ 10 ದಿನಗಳ ಅಭಿಯಾನ ಮತ್ತು ಮಾನವ ಕಳ್ಳ ಸಾಗಾಣಿಕೆ ನಿಯಂತ್ರಣ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಕಾರಾಗೃಹದಲ್ಲಿ 19 ಮಹಿಳಾ ಕೈದಿಗಳಿದ್ದು ಮೂರು ಮಕ್ಕಳಿದ್ದಾರೆ. ಆದರೆ ಮಕ್ಕಳನ್ನು ಕೈದಿಗಳೆಂದು ಪರಿಗಣಿಸಲಾಗದು. ಪುರುಷರಿಗೆ ಹೊಲಿಸಿದರೆ ಮಹಿಳೆಯರಿಗೆ ದೈಹಿಕ ಹಾಗೂ ಮಾನಸಿಕವಾಗಿ ಅನೇಕ ಸಮಸ್ಯೆಗಳಿರುತ್ತವೆ. ಈ ಹಿನ್ನೆಲೆಯಲ್ಲಿ ವಿಶೇಷವಾಗಿ ಮಹಿಳಾ ಕೈದಿಗಳಾಗಿ 10 ದಿನಗಳವರೆಗೆ ನಡೆಯುವ ಕಾರ್ಯಕ್ರಮದಲ್ಲಿ ವೈದ್ಯರು, ಶಿಕ್ಷಣಾಧಿ ಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿ ಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಮಗೆ ದೊರೆಯುವ ಸೌಲಭ್ಯಗಳ ಮಾಹಿತಿ ನೀಡುವರು ಎಂದು ತಿಳಿಸಿದರು.

ಕಾರಾಗೃಹಕ್ಕೆ ಭೇಟಿ ನೀಡುವ ಪ್ಯಾನಲ್‌ ವಕೀಲರು ಪ್ರಕರಣ ಯಾವ ಹಂತದಲ್ಲಿದೆ ಎಂಬ ಮಾಹಿತಿ ನೀಡುವರು. ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಉತ್ತಮ ಪ್ರಜೆಗಳಾಗಿ ಬಾಳಬೇಕು. ಕ್ಷಣಿಕ ಕೋಪದಿಂದ ಮಾಡಿದ ತಪ್ಪಿನಿಂದ ನೀವು ಇಂದು ಕೈದಿಗಳಾಗಿದ್ದಿರಿ ಎಂದರು.

ಮುಂದಿನ ಭವಿಷ್ಯಕ್ಕಾಗಿ ಮಹಿಳಾ ಕೈದಿಗಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ದೊರೆಯಬೇಕಾದ ಸೌಲಭ್ಯಗಳ
ಕುರಿತು ಮಾಹಿತಿ ನೀಡಲು ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

Advertisement

ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ ಸದಸ್ಯ ಕಾರ್ಯದರ್ಶಿ ವೈ.ಎಲ್‌. ಲಾಡಖಾನ್‌ ಪ್ರಾಸ್ತಾವಿಕ ಮಾತನಾಡಿ, ಕಾನೂನು ಎಲ್ಲರಿಗೂ ಒಂದೆ. ಮಹಿಳಾ ಕೈದಿಗಳಿಗೆ ಕರಕುಶಲ ತರಬೇತಿ ನೀಡಲಾಗುವುದು. ಈ ಅವಕಾಶವನ್ನು ಬಳಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದರು. ಅಪರ ಜಿಲ್ಲಾಧಿ ಕಾರಿ ಶಾಂತಾ ಹುಲ್ಮನಿ ಮಾತನಾಡಿ, ಕೆಟ್ಟ ಘಳಿಗೆಯಲ್ಲಿ ಇಲ್ಲಿ ಬಂದಿದ್ದಿರಿ. ಅದು ಮುಗಿದ ಅಧ್ಯಾಯ. ಮುಂದಿನ ಉತ್ತಮ ಜೀವನಕ್ಕೆ ಇಲ್ಲಿ ಸಿಗುವ ಅವಕಾಶವನ್ನು ಮೆಟ್ಟಿಲಾಗಿ ಬಳಸಿಕೊಳ್ಳಿರಿ ಎಂದರು.

ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶ ಅಣ್ಣುಗೌಡ ಪಾಟೀಲ, ಹಿರಿಯ ಸಿವಿಲ್‌ ನ್ಯಾಯಾ ಧೀಶರು ಹಾಗೂ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾ ಧೀಶ ವಾಸುದೇವ ಆರ್‌. ಗುಡಿ, ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಲಕ್ಷ್ಮೀ ಗರಗ, ಡಿವೈಎಸ್‌ಪಿ ಕುಮಾರಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಪ್ರಧಾನ ಕಾರ್ಯದರ್ಶಿ ದೇವರಾಜ ನಾಯ್ಡು ಸೇರಿದಂತೆ ವಿವಿಧ ಇಲಾಖೆ ಆಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ನ್ಯಾಯವಾದಿ ವಾಲಿಕಾರ ಸ್ವಾಗತಿಸಿ, ನಿರೂಪಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆಡಳಿತ, ಜಿಲ್ಲಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಂಧಿ ಖಾನೆ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್‌ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next