Advertisement

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಜೈಲಿನ ಮಹಡಿಯಿಂದ ಬಿದ್ದು ಸಾವು!

01:14 PM Dec 11, 2021 | Team Udayavani |

ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಜೈಲಿನ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ನಗರದ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ನಡೆದಿದೆ.

Advertisement

ಮಂಜು (42 ವ) ಮೃತ ಕೈದಿ. ಜೈಲಿನೊಳಗೆ ಮೊದಲ ಮಹಡಿ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ಆತನನ್ನು ನಗರದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಚಾಮರಾಜನಗರ ತಾಲೂಕು ಉತ್ತುವಳ್ಳಿ ಗ್ರಾಮದ ಮಂಜು, ತನ್ನ ಪತ್ನಿ ಚಿಕ್ಕತಾಯಮ್ಮನನ್ನು ಕೊಂದ ಹಿನ್ನೆಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.

ಇದನ್ನೂ ಓದಿ:ಜ.ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಬರಹ: ಮಂಗಳೂರಿನಲ್ಲಿ ಪ್ರಕರಣ ದಾಖಲು

ಹೆಚ್ಚುವರಿ ಜಿಲ್ಲಾ ಸತ್ರ ಡಿ. 8 ರಂದು ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಜೀವನದಲ್ಲಿ ಜುಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕಾರಾಗೃಹ ಅಧಿಕಾರಿಗಳು ಶಂಕಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next