Advertisement

Mangalore ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

02:11 AM Jul 02, 2024 | Team Udayavani |

ಮಂಗಳೂರು: ಇಲ್ಲಿನ ಕಾರಾಗೃಹದಲ್ಲಿ ಕೈದಿಗಳು ಗುಂಪಾಗಿ ಪ್ರತಿಸ್ಪರ್ಧಿ ಗ್ಯಾಂಗ್ ನ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ದಾಳಿಗೊಳಗಾಗಿ ಗಾಯಗೊಂಡವರು ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಮತ್ತು ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ ಅಲಿಯಾಸ್ ಬೋಳಿಯಾರ್ ಮನ್ಸೂರ್ (30) ಎನ್ನುವವರಾಗಿದ್ದಾರೆ. ಇಬ್ಬರೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರ ತಲೆ, ಭುಜ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಅಡುಗೆ ಮನೆಯಲ್ಲಿದ್ದ ಚೂಪಾದ ವಸ್ತುಗಳಿಂದ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ 20 ದಿನಗಳಿಂದ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದರು. ಪ್ರತಿಸ್ಪರ್ಧಿ ಗ್ಯಾಂಗ್ ನ ಟೋಪಿ ನೌಫಲ್ ಮತ್ತು ಇತರ10 ಸದಸ್ಯರು ದಾಳಿ ನಡೆಸಿದ್ದಾರೆ. ಸಂಜೆ 6. 30 ರಿಂದ 6:45 ರ ನಡುವೆ ಈ ಘಟನೆ ನಡೆದಿದೆ.

ದಾಳಿ ನಡೆಸಿದ ಆರೋಪಿಗಳು ಮುಫದ್ ರಿಫಾತ್ (28) ಮುಹಮ್ಮದ್ ರಿಜ್ವಾನ್(34),ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್, ಜೈನುದ್ದೀನ್ ಮತ್ತು ಇತರರು ಎಂದು ಪೊಲೀಸರು ವಿವರ ನೀಡಿದ್ದಾರೆ.

ಆರೋಪಿಗಳು ಮತ್ತು ದಾಳಿಗೊಳಗಾದವರು ಅನೇಕ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದು ರೌಡಿ ಶೀಟ್‌ಗಳನ್ನು ಹೊಂದಿದ್ದಾರೆ. ಪ್ರತಿಸ್ಪರ್ಧಿ ಗ್ಯಾಂಗ್‌ಗೆ ಸೇರಿದವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

Advertisement

ಘಟನೆ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. ಕಾರಾಗೃಹದ ಅಧಿಕಾರಿಗಳ ದೂರಿನ ಮೇರೆಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಉನ್ನತ ಅಧಿಕಾರಿಗಳು ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next