ಬೆಂಗಳೂರು: ಹಲವು ಅಕ್ರಮಗಳು ಬಯಲಿಗೆ ಬಂದು ಸುದ್ದಿಯಾಗಿದ್ದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಕೈದಿಗಳು ಭಾರಿ ಪ್ರತಿಭಟನೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಅಕ್ರಮಗಳು ಸುದ್ದಿಯಾಗಿದ್ದ ಬೆನ್ನಲ್ಲೇ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರಿಂದ ಕಂಗಾಲಾಗಿರುವ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಜೈಲಿನೊಳಗಿನ ಮೂಲಭೂತ ಸೌಕರ್ಯಗಳನ್ನು ಉತ್ತಮ ಪಡಿಸಬೇಕು, ಪೆರೋಲ್ ನೀಡಿ ಹೊರಗೆ ಕಳುಹಿಸಬೇಕು, ಹೊರಗಿನ ಊಟಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಉಪವಾಸ ಕೈಗೊಂಡು ಪ್ರತಿಭಟಿಸುತ್ತಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಎಡಿಜಿಪಿ ಎನ್.ಎಸ್.ಮೇಘರಿಕ್ ಅವರು ಭೇಟಿ ನೀಡಿ ಕೈದಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗಾಂಜಾ, ಮಾದಕ ವಸ್ತುಗಳ ಸರಬರಾಜಾಗುತ್ತಿದ್ದ ಹಿನ್ನಲೆಯಲ್ಲಿ ಹೊರಗಿನ ಊಟಕ್ಕೆ ಅವಕಾಶ ನೀಡಲಾಗುತ್ತಿರಲಿಲ್ಲ.
ಶಶಿಕಲಾ ನಟರಾಜನ್ ಹಾಗೂ ಛಾಪಾ ಕಾಗದ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಬ್ದುಲ್ ಕರೀಂ ಲಾಲ್ ತೆಲಗಿಗೆ ವಿಐಪಿ ಸೌಲಭ್ಯ ಸೇರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಕಾರಾಗೃಹ ಇಲಾಖೆ ಡಿಐಜಿ ಡಿ. ರೂಪಾ ಬಯಲಿಗೆಳೆದಿದ್ದರು.