Advertisement
ರೈ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಕೃಷಿ ಸಂಬಂಧಿ ಕೋರ್ಸ್ ಆರಂಭಿಸಲು ನೀಡಿದ್ದ ಅವಕಾಶವನ್ನು ಹಿಂಪಡೆಯಲು ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಶುಕ್ರವಾರ ಅನುಮೋದನೆ ನೀಡಿದೆ.
Related Articles
ಉನ್ನತ ಶಿಕ್ಷಣ ಸಚಿವರ ಪರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಅವರು ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕ-2018ನ್ನು ಮಂಡಿಸಿದರು. ರೈ ತಾಂತ್ರಿಕ ವಿವಿ ಕೃಷಿಗೆ ಸಂಬಂಧಿಸಿದ ಪದವಿ ಕೋರ್ಸ್‌ಗಳನ್ನು ಆರಂಭಿಸಿದೆಯಾದರೂ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ. ಸರ್ಕಾರಿ ಕೃಷಿ ಕಾಲೇಜುಗಳಿಗೆ ನಿಗದಿಪಡಿಸಿರುವ ಮಾನದಂಡ ಅನುಸರಿಸುತ್ತಿಲ್ಲ. ಈ ಕಾರಣಕ್ಕಾಗಿ ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ ಹಾಗೂ ಭೂ ವಿಜ್ಞಾನಗಳಿಗೆ ಸಂಬಂಧಿಸಿದ ಕೋರ್ಸ್‌ಗಳನ್ನು ನಡೆಸಲು 2012ರ ಕಾಯ್ದೆಯಲ್ಲಿ ನೀಡಿದ್ದ ಅವಕಾಶ ಹಿಂಪಡೆಯಲು ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.
Advertisement
ವಿಧೇಯಕವನ್ನು ಸ್ವಾಗತಿಸಿದ ಬಿಜೆಪಿಯ ಜೆ.ಸಿ.ಮಾಧುಸ್ವಾಮಿ, ಸುರೇಶ್‌ಕುಮಾರ್, ಅರಗ ಜ್ಞಾನೇಂದ್ರ, ಅರವಿಂದ ಲಿಂಬಾವಳಿ, ಪಿ.ರಾಜೀವ್, ಖಾಸಗಿ ವಿವಿಯಲ್ಲಿ ಕೃಷಿ ಕೋರ್ಸ್‌ಗೆ ಈಗಾಗಲೇ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಆ ವಿವಿಯಲ್ಲೇ ಪದವಿ ಪೂರೈಸುವ ಬದಲು ಅವರನ್ನು ಸರ್ಕಾರಿ ಕೃಷಿ ಕಾಲೇಜುಗಳಿಗೆ ಸೇರಿಸಬೇಕೆಂದು ಆಗ್ರಹಿಸಿದರು. ಆದರೆ, 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸರ್ಕಾರಿ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲು ಸಾಧ್ಯವಿಲ್ಲದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಬಳಿಕ ಸಭಾಧ್ಯಕ್ಷರ ಪೀಠದಲ್ಲಿದ್ದ ಉಪಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ವಿಧೇಯಕವನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ರೈ ವಿವಿ ನೌಕರರು ಚೆಕ್ಕರ್ರಾಜ್ಯ ಸರ್ಕಾರದ ಮೇಲುಸ್ತುವಾರಿ ಸಮಿತಿಯು ರೈ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆಗೆಂದು ಹೋದಾಗ ಸಿಬ್ಬಂದಿ ಸಾಮೂಹಿಕವಾಗಿ ಗೈರು ಹಾಜರಾಗಿ ಪರಿಶೀಲನೆಗೆ ಅಸಹಕಾರ ತೋರಿದ್ದರು ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದರು. ವಿವಿಯು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿದೆಯೇ? ಐಸಿಎಆರ್ ಮಾನಂದಂಡ ಮತ್ತು ನಿಯಂತ್ರಣದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಮೇಲುಸ್ತುವಾರಿ ಸಮಿತಿ ಸದಸ್ಯರು ಹೋದಾಗ ಎಲ್ಲರೂ ಗೈರು ಹಾಜರಾಗಿ ಮಾಹಿತಿ ಮುಚ್ಚಿಡುವ ಪ್ರಯತ್ನ ಮಾಡಿದರು. ಅಲ್ಲದೆ, ಉದ್ದೇಶಪೂರ್ವಕವಾಗಿ ಅವರು ಈ ರೀತಿ ಮಾಡುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂತು ಎಂದು ತಿಳಿಸಿದರು.