Advertisement

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

12:21 PM Apr 16, 2024 | Team Udayavani |

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಬಳಿ ಖಾಸಗಿ ಬಸ್ ಮತ್ತು ಫಾರ್ಚ್ಯೂನರ್ ಕಾರು ನಡುವೆ ಅಪಘಾತ ಸಂಭವಿಸಿ ಆಂಧ್ರ ಪ್ರದೇಶ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

Advertisement

ಹುಬ್ಬಳ್ಳಿ ಮಾರ್ಗವಾಗಿ ಕಾರವಾರ ಕಡೆಗೆ ಹೊರಟಿದ್ದ ಕಾರು ಹಾಗೂ ಮಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ನಡುವೆ ಈ ಅವಘಡ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಗಾಯಾಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೃತರ ಮತ್ತು ಗಾಯಾಳು ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next