ಮಂಗಳೂರು: ರಾಜ್ಯದಲ್ಲಿ ಶೇ.15ರಷ್ಟು ಬಸ್ ದರ ಏರಿಸಿ ಶುಕ್ರವಾರದಿಂದ ಖಾಸಗಿ ಬಸ್‌ಗಳ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವುದಾಗಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ.
ಆದರೆ, ಈ ಬಗ್ಗೆ ಸರಕಾರದಿಂದ ಅಧಿಕೃತ ಮಾಹಿತಿ ದೊರೆತ ಬಳಿಕವಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಜಿಲ್ಲೆಯ ಖಾಸಗಿ ಬಸ್ ಮಾಲಕರು ನಿರ್ಧರಿಸಿದ್ದಾರೆ.
ಈ ಬಗ್ಗೆ ರಾಜ್ಯಬಸ್ ಮಾಲಕರ ಒಕ್ಕೂಟದ ಅಧ್ಯಕ್ಷ ರಾಜವರ್ಮ ಬಲ್ಲಾಾಳ್ ಅವರು ‘ಉದಯವಾಣಿಗೆ ಪ್ರತಿಕ್ರಿಯಿಸಿ, ‘ಶೇ.15ರಷ್ಟು ಬಸ್ ದರ ಹೆಚ್ಚಳ ನಮ್ಮ ಬೇಡಿಕೆಯಾಗಿತ್ತು. ಸಾರಿಗೆ ಸಚಿವರು ಒಪ್ಪಿಗೆ ನೀಡದರೆ ಸಾಲದು, ಬದಲಾಗಿ ಈ ಬಗ್ಗೆ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಬೇಕು.
ಸಚಿವರು ಈ ಹಿಂದೆ ಖಾಸಗಿ ಬಸ್ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದ್ದು, ಈ ಬಗ್ಗೆ ರಾಜ್ಯ ಸರಕಾರ ಇನ್ನೂ ಅಧಿಸೂಚನೆ ಪ್ರಕಟವಾಗಿಲ್ಲ. ಅಧಿಸೂಚನೆ ಹೊರಡಿಸಿದ ಬಳಿಕವಷ್ಟೇ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸುತ್ತೇವೆ’ ಎಂದು ತಿಳಿಸಿದ್ದಾರೆ.
ಶನಿವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ರವಿವಾರ ಖಾಸಗಿ ಹಾಗೂ ನಿಗದಿತ ಸರಕಾರಿ ಬಸ್ ಸಂಚಾರವೂ ಇರುವುದಿಲ್ಲ.