Advertisement
ಬಸ್‌ಗಳಲ್ಲಿ ಕೋವಿಡ್ ನಿಯಮಾವಳಿಗಳನ್ನೆಲ್ಲ ಪಾಲಿಸಲಾಗಿತ್ತು. ಆದರೆ ಟಿಕೆಟ್ ದರದಲ್ಲಿ ಯಾವುದೇ ವ್ಯತ್ಯಾಸ ಇರಲಿಲ್ಲ. ಈ ಹಿಂದಿನಂತೆಯೇ ದರವನ್ನು ನಿಗದಿಪಡಿಸಲಾಗಿತ್ತು.
Related Articles
Advertisement
ಗುರುವಾರದಿಂದ ಬಸ್ ಸಂಚಾರ ಆರಂಭಗೊಂಡರೂ ಪ್ರಯಾಣಿಕರ ಸಂಖ್ಯೆ ವಿರ ಳವಾಗಿತ್ತು. ಬೆಳಗ್ಗೆ ಹಾಗೂ ಸಂಜೆ ವೇಳೆ ಬಿಟ್ಟರೆ ಉಳಿದಂತೆ ಬಸ್‌ಗಳಲ್ಲಿ ಪ್ರಯಾಣಿಕರೇ ಇರಲಿಲ್ಲ. ಪ್ರಯಾಣಿಕರ ಸಂಖ್ಯೆಯನ್ನು ನೋಡಿಕೊಂಡು ಹಂತ-ಹಂತವಾಗಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ವಾಹನ ಮಾಲಕರದ್ದು.
ಶನಿವಾರ, ರವಿವಾರ ಬಸ್ ಓಡಾಟ ಅನುಮಾನ :
ಜಿಲ್ಲಾದ್ಯಂತ ಜು.5ರ ವರೆಗೆ ಲಾಕ್‌ಡೌನ್, ರಾತ್ರಿ ಕರ್ಫ್ಯೂ ಇರುವುದರಿಂದ ಶನಿವಾರ ಹಾಗೂ ರವಿವಾರ ಜನರ ಓಡಾಟ ಕಡಿಮೆ ಇರುತ್ತದೆ. ಈ ದಿನದಂದು ಬಸ್‌ಗಳನ್ನು ಓಡಿಸುವ ಬಗ್ಗೆ ಮಾಲಕರು ಇದುವರೆಗೂ ತೀರ್ಮಾನಿಸಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸಲಾಗುವುದು ಎಂದು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.