Advertisement

ಖಾಸಗಿ ಕಂಪನಿ ಕಾರ್ಮಿಕರ ಪ್ರತಿಭಟನೆ

07:41 AM Jul 01, 2020 | Lakshmi GovindaRaj |

ಕೋಲಾರ: ತಾಲೂಕಿನ ನರಸಾಪುರ ಹೋಬಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡೋ ಆಟೋಟೆಕ್‌ ಖಾಸಗಿ ಕಂಪನಿಯು ಉತ್ತರ ಪ್ರದೇಶದಲ್ಲಿ ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಾ, ಸ್ಥಳೀಯರನ್ನು ಕಡೆಗಣಿಸಿದೆ ಎಂದು ಆರೋಪಿಸಿ ಕಾರ್ಮಿಕರು ಕಂಪನಿ  ಮುಂದೆ ಪ್ರತಿಭಟನೆ ನಡೆಸಿದರು.

Advertisement

ಉತ್ತರ ಪ್ರದೇಶದ ಕಾರ್ಮಿಕರಿಗೆ ಎರಡು ತಿಂಗಳ ಸಂಬಳ ನೀಡಿ, ಕರೆತಂದು ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ತಿಳಿದು ಕಂಪನಿಯಲ್ಲಿ  ಕೆಲಸ ಮಾಡುವ ಕಾರ್ಮಿಕರು ಹಾಗೂ ಸ್ಥಳೀಯರು ಮಂಗಳವಾರ ಬೆಳಗ್ಗೆ ಪ್ರತಿಭಟನೆ ಮಾಡಿದರು. ಈ ವೇಳೆ ಸ್ಥಳೀಯರು ಮಾತನಾಡಿ, ಬೇರೆ ರಾಜ್ಯಗಳಲ್ಲಿ ಕ್ವಾರಂಟೈನ್‌ನಲ್ಲಿ ಇರುವವರನ್ನು ಕರೆತಂದು ಈ ಕಂಪನಿಯು ಕೆಲಸ  ಮಾಡಿಸುತ್ತಿದೆ.

ಈಗಾಗಲೇ ರಾಜ್ಯಾದ್ಯಂತ ಕೋವಿಡ್‌ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಬೇರೆ ರಾಜ್ಯದ ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸುವುದು ಎಷ್ಟರ ಮಟ್ಟಿಗೆ ಸರಿ, ಹಾಗೆಯೇ ಕೆಲವರ ಕೈಮೇಲೆ ಕ್ವಾರಂಟೈನ್‌ ಸೀಲ್‌ ಸಹ ಇದೆ  ಎಂದು ದೂರಿದರು. ಕಂಪನಿಯು ಬೆಳಗ್ಗೆ 8 ಗಂಟೆಯಿಂದ ಸಂಜೆ 8 ಗಂಟೆ ತನಕ ಕೆಲಸ ಮಾಡಿಸಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ, ನಮಗೆ ಸೂಕ್ತ ಭದ್ರತೆಯಿಲ್ಲ,

ಕ್ಯಾಂಟೀನ್‌ನಲ್ಲಿ ಸರಿಯಾದ ಊಟದ ವ್ಯವಸ್ಥೆ ಇಲ್ಲ ಎಂದು ತಿಳಿಸಿದರು. ಸ್ಥಳಕ್ಕೆ  ಮಾಲೂರು ತಹಶೀ ಲಾರ್‌ ಮಂಜುನಾಥ್‌, ಸಬ್‌ಇನ್ಸ್‌ ಪೆಕ್ಟರ್‌ ಕೆ.ಎಸ್‌.ಆಂಜಿ ನಪ್ಪ, ಕೋಲಾರ ತಾಲೂಕು ವೈದ್ಯಾಧಿಕಾರಿ ಡಾ. ರಮ್ಯ ದೀಪಿಕಾ, ಕೆ.ಇ.ಬಿ ಚಂದ್ರು, ರಕ್ಷಣಾವೇದಿಕೆಯ ಜಿಲ್ಲಾ ಪ್ರಧಾನ ಸಂಚಾಲಕ ಮೆಹಬೂಬ್‌ ಭೇಟಿ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next