Advertisement
ಈ ಮಧ್ಯೆ, ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಮಿತಿಯಲ್ಲಿನ ಬಿಜೆಪಿ ಸದಸ್ಯರು, ಕೇಂದ್ರ ಸರ್ಕಾರದ 2010ರ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಆಧಾರದಲ್ಲಿ ವಿಧೇಯಕ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ. ಜತೆಗೆ, ಈಕಾನೂನಿನ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನೂ ತರಬೇಕು ಎಂದು ಸಮಿತಿಯಲ್ಲಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಕೆ.ಎಸ್.ಈಶ್ವರಪ್ಪ, ಕ್ಯಾ.ಗಣೇಶ್ ಕಾರ್ಣಿಕ್, ಡಾ.ಅಶ್ವಥ್ ನಾರಾಯಣ್ ಒತ್ತಾಯಿಸಿದ್ದಾರೆ.
ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ಕೆ.ಎನ್ ರಾಜಣ್ಣ ನೇತೃತ್ವದಲ್ಲಿ ಜಂಟಿ ಸದನ ಸಮಿತಿ ರಚಸಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದರು. ಅದರಂತೆ ಸಮಿತಿ ಹಲವಾರು ಬಾರಿ ಸಭೆ ಸೇರಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಜೊತೆಯೂ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಿದ್ದಾರೆ. ಪ್ರಮುಖವಾಗಿ ಖಾಸಗಿ ವೈದ್ಯಕೀಯ ಸಂಸ್ಥೆಗಳು ತಪ್ಪು ಮಾಡಿದ್ದರೆ, ಆರು ತಿಂಗಳಿಂದ ಮೂರು ವರ್ಷ ಶಿಕ್ಷೆ ವಿಧಿಸುವ ಅಂಶವನ್ನು ವಿಧೇಯದಿಂದ ಕೈ ಬಿಡಲಾಗಿದೆ. ನಕಲಿ ವೈದ್ಯರ ಹಾವಳಿ ತಡೆಯಲು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳ ನೋಂದಣಿಗೆ ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡುತ್ತಾರೆ ಎಂಬ ಖಾಸಗಿ ಆಸ್ಪತ್ರೆಗಳ ಆರೋಪಕ್ಕೆ ಸ್ಪಂದಿಸಿರುವ ಸಮಿತಿ, ಸರ್ಕಾರಿ ಅಧಿಕಾರಿಗಳು ಅರ್ಜಿ ಸಲ್ಲಿಸಿ 90 ದಿನ ಕಳೆದರೂ ನೋಂದಣಿ ಮಾಡದಿದ್ದರೆ, ಅಧಿಕೃತ ನೋಂದಣಿಯಾಗಿದೆ ಎಂದು ಪರಿಗಣಿಸಲು
ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.
Related Articles
ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ, ಖಾಸಗಿ ವೈದ್ಯಕೀಯ ಸಂಸ್ಥೆಯ ಪ್ರತಿನಿಧಿಗಳು, ಸಾರ್ವಜನಿಕರೂ ಸದಸ್ಯರಾಗಿರುತ್ತಾರೆ. ಪ್ರತಿಯೊಂದು ಆಸ್ಪತ್ರೆಯಲ್ಲಿಯೂ ದೊರೆಯುವ ಸವಲತ್ತುಗಳು ಮತ್ತು ಪ್ರತಿ ಚಿಕಿತ್ಸೆ ಹಾಗೂ ಶಸOಉ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶನ ಮಾಡಬೇಕು. ಒಂದು ವೇಳೆ ರೋಗಿಯು ಮೃತ ಪಟ್ಟರೆ, ಬಾಕಿ ಹಣ ಪಡೆಯಲು ಪೀಡಿಸದೇ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಬೇಕು.
Advertisement
ಒಂದು ವೇಳೆ, ಆಸ್ಪತ್ರೆಯವರು ನಿಗದಿ ಪಡಿಸಿರುವ ದರಕ್ಕಿಂತ ಹೆಚ್ಚಿನ ಹಣ ಪಡೆದರೆ, ಬಾಕಿ ಪಾವತಿಸುವರೆಗೂ ಶವ ನೀಡಲು ನಿರಾಕರಿಸಿದರೆ, ಸಂಬಂಧ ಪಟ್ಟ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಗೆ ದೂರು ನೀಡಲು ಅವಕಾಶಕಲ್ಪಿಸಲಾಗಿದೆ. ವೈದ್ಯರೂ ಕೂಡ ತಮ್ಮ ಮೇಲೆ ಅನಗತ್ಯ ಕಿರುಕುಳವಾಗುತ್ತಿದ್ದರೆ, ಅವರಿಗೂ ದೂರು ನೀಡಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜಣ್ಣ ನೇತೃತ್ವದ ಸಮಿತಿಯಲ್ಲಿ ವಿಧೇಯಕ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ತರುವಂತೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಆಗ್ರಹಿಸಿದ್ದರು. ಆದರೆ, ಸರ್ಕಾರಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಹಲವಾರು ಕಾನೂನುಗಳಿರುವುದರಿಂದ ಈ ವಿಧೇಯಕದ ವ್ಯಾಪ್ತಿಯಲ್ಲಿ ತರಲು ಸಮಿತಿ ನಿರಾಕರಿಸಿದೆ ಎಂದು ತಿಳಿದು ಬಂದಿದೆ. ಈ ತಿದ್ದುಪಡಿ ವಿಧೇಯಕವನ್ನು ನವೆಂಬರ್‌ನಲ್ಲಿ ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ.