Advertisement
ಮೈಸೂರು ನಗರ ಖಾಸಗಿ ಆಸ್ಪತ್ರೆಗಳ ಸಂಘ, ಭಾರತೀಯ ವೈದ್ಯಕೀಯ ಸಂಘದ ಮೈಸೂರು ಶಾಖೆಯ ನೇತೃತ್ವದಲ್ಲಿ ನಗರದ ಜೆ.ಕೆ.ಮೈದಾನದಲ್ಲಿ ಜಮಾಯಿಸಿದ ನೂರಾರು ವೈದ್ಯರು, ಶುಶ್ರೂಷಕಿಯರು, ತಂತ್ರಜ್ಞರು ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
Related Articles
Advertisement
ಇದರಿಂದಾಗಿ ಕೆ.ಆರ್.ಆಸ್ಪತ್ರೆಯಲ್ಲಿ ಪ್ರತಿದಿನಕ್ಕಿಂತಲೂ ಹೆಚ್ಚಿನ ರೋಗಿಗಳು ಆಗಮಿಸಿ ಚಿಕಿತ್ಸೆ ಪಡೆದರು. ಸರ್ಕಾರ ವೈದ್ಯರ ರಜೆ ರದ್ದುಪಡಿಸುವ ಜತೆಗೆ, ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಎಂದಿನಂತೆ ಕಾರ್ಯ ನಿರ್ವಹಿಸಿದರು.
ಮುಷ್ಕರದ ಪರಿಣಾಮ ನಗರದ ಜೆಎಸ್‌ಎಸ್ ಆಸ್ಪತ್ರೆ, ಕೊಲಂಬಿಯಾ ಏಷಿಯಾ, ಬಿಜಿಎಸ್ ಅಪೋಲೋ, ಗೋಪಾಲಗೌಡ ಆಸ್ಪತ್ರೆ, ಕಾಮಾಕ್ಷಿ ಆಸ್ಪತ್ರೆ, ಸೆಂಟ್ ಜೋಸೆಫ್, ಮಿಷನ್ ಆಸ್ಪತ್ರೆ ಸೇರಿದಂತೆ ನಗರದ 120 ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ಸೇರಿದಂತೆ ಹಲವು ಡಯಾಗ್ನೊàಸ್ಟಿಕ್ ಸೆಂಟರ್‌ಗಳು ಸೇವೆ ಸ್ಥಗಿತಗೊಳಿಸಿದ್ದವು. ಅಲ್ಲದೆ, ಮುಷ್ಕರ ಹಿನ್ನೆಲೆಯಲ್ಲಿ ಜೆ.ಕೆ.ಮೈದಾನ ಅಲ್ಯುಮಿನಿ ಅಸೋಸಿಯೇಷನ್ ಅಮೃತ ಮಹೋತ್ಸವ ಭವನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಮೈಸೂರು ಖಾಸಗಿ ಆಸ್ಪತ್ರೆಗಳ ಸಂಘದ ಅಧ್ಯಕ್ಷ ಡಾ.ಮಹೇಶ್‌ಕುಮಾರ್, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ವಿಶ್ವೇಶ್ವರಯ್ಯ, ಕಾರ್ಯದರ್ಶಿ ಡಾ.ಸುಜಾತರಾವ್, ಡಾ.ಸಂಜಯ್, ಡಾ.ಸಂತೃಪ್ತ್, ವಿಜಯ್, ಡಾ.ಅಭಿಜಿತ್ ಮತ್ತಿತರರಿದ್ದರು.
ಸರ್ಕಾರ ಜಾರಿಗೊಳಿಸಲು ಹೊರಟಿರುವ ಕಾಯ್ದೆ ಜಾರಿಗೆ ಬಂದರೆ ಖಾಸಗಿ ಆಸ್ಪತ್ರೆ, ವೈದ್ಯರು, ವೈದ್ಯ ಸಿಬ್ಬಂದಿ ಮೇಲೆ ಪರಿಣಾಮ ಬೀರಲಿದೆ. ಈಗಾಗಲೇ ಗ್ರಾಹಕರ ನ್ಯಾಯಾಲಯ ಮತ್ತು ವೈದ್ಯಕೀಯ ಪರಿಷತ್ತುಗಳು ರೋಗಿಗಳಿಗೆ ನ್ಯಾಯ ಒದಗಿಸುತ್ತಿದ್ದು, ಹೀಗಿದ್ದರೂ ಜಿಲ್ಲಾಮಟ್ಟದಲ್ಲಿ ಮತ್ತೂಂದು ಕುಂದುಕೊರತೆ ಪರಿಹಾರ ಸಮಿತಿ ರಚನೆ ಅವಶ್ಯಕತೆ ಇದೆಯೇ? ವೈದ್ಯರು ಮಾನಸಿಕವಾಗಿ ಗುಣಮಟ್ಟದ ಸೇವೆ ನೀಡಲು ಸಾಧ್ಯವಾಗಲಿದೆಯೇ?.-ಡಾ.ಮಹೇಶ್‌ಕುಮಾರ್, ಮೈಸೂರು ಖಾಸಗಿ ಆಸ್ಪತ್ರೆಗಳ ಸಂಘದ ಅಧ್ಯಕ್ಷ