Advertisement

ಕೋವಿಡ್‌ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆ ಸಹಕಾರ ಮುಖ್ಯ: ಶೆಟ್ಟರ

10:12 AM Jul 18, 2020 | Suhan S |

ಧಾರವಾಡ: ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್‌ ಶೆಟ್ಟರ ಹೇಳಿದರು.

Advertisement

ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಕೋವಿಡ್‌ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್‌ ಸೋಂಕಿತರ ತ್ವರಿತ ಪತ್ತೆಗೆ ಮತ್ತೂಂದು ಪ್ರಯೋಗಾಲಯ ಆರಂಭವಾಗುತ್ತಿರುವುದು ನೆರವಾಗಲಿದೆ ಎಂದ ಅವರು ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡುತ್ತಿರುವ ಎಸ್‌ಡಿಎಂ ಆಸ್ಪತ್ರೆ ಉಳಿದ ಖಾಸಗಿ ಆಸ್ಪತ್ರೆಗಳಿಗೆ ಮಾದರಿಯಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಆನ್‌ಲೈನ್‌ ಗೂಗಲ್‌ ಮೀಟ್‌ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ, ಈ ವಿಷಮ ಪರಿಸ್ಥಿತಿ ಎದುರಿಸಿ ಜಯಿಸಬೇಕಾಗಿದೆ. ಸೋಂಕಿನ ಸರಪಳಿ ತುಂಡರಿಸಲು, ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಜತೆಗೆ ಹೆಚ್ಚು ಪರೀಕ್ಷೆಗಳೂ ಆಗಬೇಕು. ನಮ್ಮ ದೇಶದ ಜನಸಂಖ್ಯೆ, ಜನಸಾಂದ್ರತೆಗೆ ಹೋಲಿಸಿದಾಗ ಕೋವಿಡ್‌ ನಿಯಂತ್ರಣದಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯುಳ್ಳ ಕ್ರಮಗಳು ಉತ್ತಮ ಪರಿಣಾಮ ನೀಡುತ್ತಿವೆ ಎಂದರು.

ಗೂಗಲ್‌ ಮೀಟ್‌ ಮೂಲಕ ಮಾತನಾಡಿದ, ಧರ್ಮಸ್ಥಳ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆಯವರು, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರ ಒತ್ತಾಸೆಯಿಂದ ಎಸ್‌ಡಿಎಂ ವಿಶ್ವವಿದ್ಯಾಲಯದಲ್ಲಿ ಕೋವಿಡ್‌ ತಪಾಸಣೆ ಪ್ರಯೋಗಾಲಯ ಸ್ಥಾಪಿಸಲು, ಐಸಿಎಂಆರ್‌ ಹಾಗೂ ಎನ್‌ಎಬಿಎಲ್‌ ಮಾನ್ಯತೆ ಶೀಘ್ರ ದೊರಕಲು ಸಾಧ್ಯವಾಗಿದೆ ಎಂದರು.

ಎಸ್‌ಡಿಎಂ ವಿವಿ ಉಪಕುಲಪತಿ , ಕಾಲೇಜು ನಿರ್ದೇಶಕ ಡಾ| ನಿರಂಜನಕುಮಾರ, ಪ್ರಾಚಾರ್ಯೆ ಡಾ| ರತ್ನಮಾಲಾ ದೇಸಾಯಿ, ವೈದ್ಯಕೀಯ ಅ ಧೀಕ್ಷಕ ಡಾ|ಕಿರಣ ಹೆಗಡೆ, ಮೈಕ್ರೊಬಯಾಲಜಿ ವಿಭಾಗದ ಮುಖ್ಯಸ್ಥ ಡಾ| ಆರ್‌ .ಡಿ.ಕುಲಕರ್ಣಿ, ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿ ಕಾರಿ ನಾಗರಾಜ ಕಲ್ಲಾಪುರ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next