ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ. ಆರೋಗ್ಯ ಸೇವೆ ಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
Advertisement
ಜನತೆಗೆ ಆರೋಗ್ಯ ಸೇವೆಯಲ್ಲಿ ತೊಂದರೆಯಾಗದಂತೆ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ಅರೆವೈದ್ಯ ಸಿಬಂದಿ ಶುಕ್ರವಾರ ಕರ್ತವ್ಯದಲ್ಲಿದ್ದು, ಕಾರ್ಯ ನಿರ್ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಜತೆಗೆ ಸರ ಕಾರಿ ವೈದ್ಯ ಕಾಲೇಜುಗಳ ಆಸ್ಪತ್ರೆ ಗಳಲ್ಲೂ ಎಲ್ಲ ವೈದ್ಯ, ಅರೆವೈದ್ಯ ಸಿಬಂದಿ ಕರ್ತವ್ಯದಲ್ಲಿದ್ದು, ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.