Advertisement

ಇಂದು ಖಾಸಗಿ ಆಸ್ಪತ್ರೆ ಒಪಿಡಿ ಬಂದ್‌

09:38 AM Nov 09, 2019 | mahesh |

ಬೆಂಗಳೂರು: ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಬೆಂಗಳೂರು ಮೆಡಿಕಲ್‌ ಕಾಲೇಜು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ನಿವಾಸಿ ವೈದ್ಯರ ಸಂಘ ಆರು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಗೆ ಭಾರತೀಯ ವೈದ್ಯರ ಸಂಘ (ಐಎಂಎ) ಮತ್ತು ಫ‌ನಾ (ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್‌ ಹೋಂ ಅಸೋಸಿಯೇಶನ್‌) ಸಹಕಾರ ನೀಡಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗ (ಒಪಿಡಿ) ಬಂದ್‌ ಆಗಿರುವ ಸಾಧ್ಯತೆ ಇದೆ. ಆಸ್ಪತ್ರೆಗಳಲ್ಲಿ ಐಸಿಯು ಮತ್ತು ತುರ್ತುಸೇವೆಗಳು ಲಭ್ಯವಿರಲಿವೆ.

Advertisement

ಸರಕಾರಿ ಆಸ್ಪತ್ರೆಗಳಲ್ಲಿ ಎಂದಿನಂತೆ ಸೇವೆ
ಸರಕಾರಿ ಆಸ್ಪತ್ರೆಗಳ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್‌ ಮಾಡಲು ನಿರ್ಧರಿಸಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಹೆಚ್ಚಿರುತ್ತದೆ. ಹೀಗಾಗಿ ವೈದ್ಯರು ರಜೆ ಪಡೆಯದೆ ಕಡ್ಡಾಯವಾಗಿ ಸೇವೆಗೆ ಹಾಜರಾಗಬೇಕು ಎಂದು ಇಲಾಖೆ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next