Advertisement

ಶೇ. 50 ಹಾಸಿಗೆ ಮೀಸಲು : ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರಕಾರದ ಸೂಚನೆ

12:41 AM Apr 07, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕುಪೀಡಿತರ ಚಿಕಿತ್ಸೆಗೆ ಸರಕಾರಿ ಆಸ್ಪತ್ರೆಗಳಲ್ಲಿ 33 ಸಾವಿರ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಜತೆಗೆ ಖಾಸಗಿ ಆಸ್ಪತ್ರೆಗಳು ಶೇ. 50ರಷ್ಟು ಹಾಸಿಗೆ ಗಳನ್ನು ಸರಕಾರದಿಂದ ಶಿಫಾರಸಾಗುವ ಸೋಂಕು ಪೀಡಿತರಿಗೆ ಮೀಸಲಿಡುವಂತೆ ಸೂಚಿಸಲಾಗಿದೆ.

Advertisement

ಕೊರೊನಾ ಹೆಚ್ಚಳವಾಗುತ್ತಿದ್ದು, ಸೋಂಕು ಪೀಡಿತರ ಚಿಕಿತ್ಸೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳ ಲಾಗಿದೆ. ಸದ್ಯ 33,697 ಹಾಸಿಗೆಗಳನ್ನು ಸರಕಾರಿ ಆಸ್ಪತ್ರೆಗಳಲ್ಲಿ ಮೀಸಲಿಡಲಾಗಿದೆ. 15,733 ಆಕ್ಸಿಜನ್‌ ಸಹಿತ ಹಾಸಿಗೆಗಳಿದ್ದು, ಈ ಪೈಕಿ 10,083 ಹಾಸಿಗೆಗಳನ್ನು ಕೊರೊನಾಗೆ ಮೀಸಲಿಡ ಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ತಿಳಿ ಸಿ ದ್ದಾರೆ.

ಖಾಸಗಿ ಆಸ್ಪತ್ರೆಗಳು ಶೇ. 50ರಷ್ಟು ಹಾಸಿಗೆ ಗಳನ್ನು ಕೊರೊನಾ ಪೀಡಿತರಿಗೆ ಮೀಸಲಿಡಬೇಕು ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಖಾಸಗಿ ವೈದ್ಯಕೀಯ ಸಂಸ್ಥೆಗಳು ಹಾಸಿಗೆಗಳನ್ನು ಮೀಸಲಿರಿಸುವ ಕುರಿತು 2020 ಜೂನ್‌ನ ಸರಕಾರದ ಸುತ್ತೋಲೆಯ ನಿರ್ದೇಶನವನ್ನು ಪಾಲಿಸಬೇಕು. ಇದನ್ನು ನೋಡಲ್‌ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸಾ ವೆಚ್ಚ ಮರುಪಾವತಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ನೋಡಿಕೊಳ್ಳುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆಸ್ಪತ್ರೆಗಳಲ್ಲಿ ವಿಧಿಸುವ ದರ ಪಟ್ಟಿ ಬಗ್ಗೆಯೂ ಉಲ್ಲೇಖೀಸಲಾಗಿದೆ.

ಯುವಜನರು, ಮಧ್ಯವಯಸ್ಕರ ಸಾವು
ದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸೋಂಕು ಪೀಡಿತರು ಒಂದೇ ದಿನ ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಸೋಮವಾರ ಒಂದೇ ದಿನ 32 ಸಾವು ಸಂಭವಿಸಿದೆ. ಮಧ್ಯವಯಸ್ಕರು, 25 ವರ್ಷದ ಯುವ ಜನರು ಸಾವಿಗೀಡಾಗಿರುವುದು ಆತಂಕ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಸಾವಿನ ಆಡಿಟ್‌ ಮಾಡಬೇಕೆಂದು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದೆ. ಮೊದಲ ಅಲೆಗೆ ಹೋಲಿಸಿದರೆ ಎರಡನೇ ಅಲೆ ಬೇಗ ಹರಡು ತ್ತಿದೆ. ಇದರ ತೀವ್ರತೆ ಕಡಿಮೆ ಇದೆಯೋ ಅಥವಾ ಹೆಚ್ಚಿದೆಯೋ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಅದನ್ನು ಎದುರಿಸಲು ಬೇಕಾದ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಸುಧಾಕರ್‌ ತಿಳಿಸಿದರು.

Advertisement

ಯಾರಿಗೆ ಎಷ್ಟು ದರ?
ಸರಕಾರದ ಮೂಲಕ ಕಳುಹಿಸುವ ರೋಗಿಗಳಿಗೆ
ಜನರಲ್‌ ವಾರ್ಡ್‌ : 5,200 ರೂ.
ಆಕ್ಸಿಜನ್‌ ಹಾಸಿಗೆ : 7,000 ರೂ.
ವೆಂಟಿಲೇಟರ್‌ ರಹಿತ ಐಸಿಯು ಹಾಸಿಗೆ : 8,500 ರೂ.
ವೆಂಟಿಲೇಟರ್‌ ಸಹಿತ ಹಾಸಿಗೆ : 10,000 ರೂ.

ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವವರಿಗೆ
ಜನರಲ್‌ ವಾರ್ಡ್‌ : 10,000 ರೂ.
ಆಕ್ಸಿಜನ್‌ ಹಾಸಿಗೆ ; 12,000 ರೂ.
ವೆಂಟಿಲೇಟರ್‌ ರಹಿತ ಐಸಿಯು ಹಾಸಿಗೆ : 15,000 ರೂ.
ವೆಂಟಿಲೇಟರ್‌ ಸಹಿತ ಹಾಸಿಗೆ : 25,000 ರೂ.

Advertisement

Udayavani is now on Telegram. Click here to join our channel and stay updated with the latest news.

Next