Advertisement

ಕೋವಿಡ್‌ ಚಿಕಿತ್ಸೆಗೆ ಕೊನೆಗೂ ಒಪ್ಪಿದ ಖಾಸಗಿ ಆಸ್ಪತ್ರೆಗಳು

01:31 PM Jul 10, 2020 | Suhan S |

ಧಾರವಾಡ: ಕೋವಿಡ್‌-19 ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆಗಳು ಹಾಗೂ ಕಿಮ್ಸ್‌ ಜೊತೆಗೆ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿ ಯಾಗಿರುವ ಖಾಸಗಿ ಆಸ್ಪತ್ರೆಗಳೂ ಕೂಡಾ ತಮ್ಮಲ್ಲಿರುವ ಒಟ್ಟು ಹಾಸಿಗೆಗಳ ಸಾಮರ್ಥ್ಯದ ಶೇ.50ನ್ನು ಕೋವಿಡ್‌ ಚಿಕಿತ್ಸೆಗೆ ಮೀಸಲಿಡಲು ಒಪ್ಪಿಗೆ ನೀಡಿವೆ. ಇಂದಿನಿಂದಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಧಿಕಾರಿ ನಿತೇಶ್‌ ಪಾಟೀಲ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಆಸ್ಪತ್ರೆಗಳ ಪ್ರತಿನಿ  ಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕೋವಿಡ್‌ ನಿಯಂತ್ರಣ ಕಾರ್ಯವನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ವೈರಾಣುವನ್ನು ತಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಕೂಡಾ ಮುಖ್ಯವಾಗಿದೆ. ಅವಳಿ ನಗರದಲ್ಲಿ 18 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಎಲ್ಲಾ ಆಸ್ಪತ್ರೆಗಳು ತಮ್ಮಲ್ಲಿರುವ ಒಟ್ಟು ಹಾಸಿಗೆಗಳು, ಐಸಿಯು ಹಾಗೂ ವೆಂಟಿಲೇಟರ್‌ಗಳ ಮಾಹಿತಿಯನ್ನು ಒದಗಿಸಿವೆ. ಇವುಗಳಲ್ಲಿ ಶೇ.50ನ್ನು ಕೋವಿಡ್‌ ಚಿಕಿತ್ಸೆಗೆ ಒದಗಿಸಬೇಕು.ರೋಗ ಲಕ್ಷಣ ಇರುವವರನ್ನು ಮತ್ತು ಸಾಮಾನ್ಯ ಜ್ವರ ಇರುವವರನ್ನು ಈ ಆಸ್ಪತ್ರೆಗಳಿಗೆ ದಾಖಲಿಸಲಾಗುವುದು. ಸಾರ್ವಜನಿಕ ವಲಯದ ಆಸ್ಪತ್ರೆಯಿಂದ ಶಿಫಾರಸುಗೊಂಡು ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳು ಬಂದರೆ ಅವರಿಗೆ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಬೇಕು. ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳು ದಾಖಲಾದರೆ ಅದರ ವೆಚ್ಚವನ್ನು ರೋಗಿಗಳೇ ಭರಿಸುತ್ತಾರೆ. ಕೋವಿಡ್‌ ರೋಗಿಗಳ ಚಿಕಿತ್ಸೆ ಮತ್ತು ಆಕಸ್ಮಿಕವಾಗಿ ಕೋವಿಡ್‌ನಿಂದ ಮೃತಪಡುವ ವ್ಯಕ್ತಿಗಳ ಪಾರ್ಥಿವ ಶರೀರದ ನಿರ್ವಹಣೆ ಕುರಿತು ಮಾರ್ಗದರ್ಶನ ಅಗತ್ಯವಿರುವ ಆಸ್ಪತ್ರೆಗಳು ತಮ್ಮ ವೈದ್ಯರು ಮತ್ತು ಸಿಬ್ಬಂದಿಯನ್ನು ಕಿಮ್ಸ್‌ ಗೆ ನಿಯೋಜಿಸಿ ಒಂದು ದಿನ ತರಬೇತಿ ಪಡೆಯಬಹುದು. ಕಿಮ್ಸ್‌ ವೈದ್ಯರು ಮತ್ತು ಸಿಬ್ಬಂದಿ ತಂಡ ಮಾರ್ಗದರ್ಶನ ನೀಡಲಿದೆ ಎಂದರು.

ಖಾಸಗಿ ಆಸ್ಪತ್ರೆ ಸಮರ್ಥ: ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದಂತೆ ಚಿಕಿತ್ಸೆ ನೀಡಿ ನಿಯಮಾನುಸಾರ ಸಹಕರಿಸಬೇಕು. ರೋಗಲಕ್ಷಣಗಳನ್ನು ಆಧರಿಸಿ ಸೋಂಕಿತರನ್ನು ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಸೆಂಟರ್‌ ಗಳಿಗೆ ಕಳುಹಿಸಿಕೊಡಲಾಗುವುದು. ಖಾಸಗಿ ಆಸ್ಪತ್ರೆಗಳು ಕೋವಿಡ್‌ ಚಿಕಿತ್ಸೆ ನೀಡಲು ಸಮರ್ಥವಾಗಿವೆ. ತಮ್ಮಲ್ಲಿ ಇರುವ ವೈದ್ಯಕೀಯ, ಅರೆವೈದ್ಯಕೀಯ ಹಾಗೂ ಸಹಾಯಕ ಸಿಬ್ಬಂದಿಗೆ ಸೂಕ್ತ  ತಿಳಿವಳಿಕೆ ನೀಡಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದರು.

ಪೊಲೀಸ್‌ ಆಯುಕ್ತ ಆರ್‌. ದಿಲೀಪ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಪಾಲಿಕೆ ಉಪ ಆಯುಕ್ತ ಅಜೀಜ್‌ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಯಶವಂತ ಮದೀನಕರ, ಜಿಲ್ಲಾ ಸರ್ವೆಕ್ಷಣಾಧಿ ಕಾರಿ ಡಾ| ಸುಜಾತಾ ಹಸವೀಮಠ, ಡಾ| ಶಶಿ ಪಾಟೀಲ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next