Advertisement
ಬೆಂಗಳೂರಿನ ಇಂದಿರಾನಗರದಲ್ಲಿ ಡಾಕ್ಟರ್.ಅಗರ್ ವಾಲ್ಸ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಧತ್ವ ಬಹಳ ನೋವಿನ ಸಂಗತಿ. ಯಾರೇ ಇರಲಿ, ಭಗವಂತ ಸೃಷ್ಟಿ ಮಾಡಿರುವ ಪ್ರಕೃತಿಯನ್ನು ನೋಡಲು ಸಾಧ್ಯವಾಗುವುದು ನಮ್ಮ ಕಣ್ಣುಗಳಿಂದ. ಆದರೆ ಕಣ್ಣೇ ಇಲ್ಲದಿದ್ದರೆ ಈ ಸುಂದರ ಪ್ರಕೃತಿಯನ್ನು ಸವಿಯಲು ಅಸಾಧ್ಯ. ವಿಶ್ವದಲ್ಲಿ 4 ಕೋಟಿಗೂ ಹೆಚ್ಚು ಜನರಿಗೆ ಅಂಧತ್ವ ಇದೆ. ಭಾರತದಲ್ಲಿ ಪ್ರತಿವರ್ಷ 1 ಲಕ್ಷ ನೇತ್ರದಾನಿಗಳ ಅವಶ್ಯಕತೆ ಇದೆ. ಆದರೆ ನಮಗೆ ಸಿಗುತ್ತಿರುವ ದಾನಿಗಳ ಪ್ರಮಾಣ ಕೇವಲ 5% ಮಾತ್ರ. ಕಣ್ಣಿನ ದಾನಿಗಳ ಕೊರತೆ ನಮ್ಮನ್ನು ಕಾಡುತ್ತಿದೆ. ದೇಶದಲ್ಲಿ 10.8 ಲಕ್ಷ ಮಕ್ಕಳು ಅಂಧತ್ವಕ್ಕೆ ಒಳಗಾಗಿದ್ದಾರೆ ಎಂದರು.
Related Articles
Advertisement
ನೇತ್ರದಾನದ ಮಹತ್ವ ತಿಳಿಸಿ
ರಾಜ್ಯದಲ್ಲಿರುವ 21 ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಇನ್ನಷ್ಟು ಹೆಚ್ಚಿಸುವ ಯೋಜನೆ ರೂಪಿಸಿದ್ದೇವೆ. ಖಾಸಗಿ ಆಸ್ಪತ್ರೆಗಳು ದೊಡ್ಡಮಟ್ಟದಲ್ಲಿ ನೇತ್ರದಾನದ ಮಹತ್ವವನ್ನು ಸಮಾಜಕ್ಕೆ ತಿಳಿಸಿಕೊಡಬೇಕು. ಗ್ರಾಮೀಣ ಭಾಗದಲ್ಲಿ ಐ ಕ್ಯಾಂಪ್ ಗಳನ್ನು ಮಾಡಬೇಕು ಎಂದು ಮನವಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಪ್ರಜಾಪ್ರಭುತ್ವ ಹಾಗೂ ಭಾರತದ ಅಭಿವೃದ್ಧಿಯ ಹರಿಕಾರ. ಹಾಗೆಯೇ ಡಾ.ಎಂ.ಸಿ.ಮೋದಿಯವರು ಕಣ್ಣಿನ ಆಸ್ಪತ್ರೆಗಳನ್ನು ಕಟ್ಟಿಸಿ ಎಲ್ಲರಿಗೂ ದೃಷ್ಟಿ ಸಿಗಬೇಕು ಅನ್ನುವ ಕನಸು ಕಂಡಿದ್ದರು. ತನ್ನ 40 ವರ್ಷಗಳ ಸೇವೆಯಲ್ಲಿ ಹಲವು ಸರ್ಜರಿಗಳನ್ನು ಅವರು ಮಾಡಿದ್ದರು. ಲಕ್ಷಾಂತರ ಕಣ್ಣಿನ ಸಮಸ್ಯೆಗಳನ್ನು ಪರಿಹರಿಸಿದರು. ಡಾ.ಎಂ.ಸಿ.ಮೋದಿಯವರ ಸೇವೆ ಮಾದರಿ ಎಂದರು.