Advertisement

ಖಾಸಗಿ ವೈದ್ಯರ ಮುಷ್ಕರ; ಚಿಕಿತ್ಸೆ ನೀಡಲು ನಕಾರ, ರೋಗಿಗಳ ಪರದಾಟ

11:26 AM Nov 03, 2017 | Sharanya Alva |

ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ(ಕೆಪಿಎಂಇ) ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶಗಳನ್ನು ಕೈಬಿಡುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು ಹಾಗೂ ಸುಮಾರು 60 ಸಾವಿರ ವೈದ್ಯರು ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದಾಗಿ ಹೊರರೋಗಿಗಳು ಚಿಕಿತ್ಸೆ ದೊರೆಯದೆ ಪರದಾಡುವಂತಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಶುಕ್ರವಾರ ಬೆಳಗ್ಗೆ 8ಗಂಟೆಯಿಂದ ಶನಿವಾರ ಬೆಳಗ್ಗೆ 8ಗಂಟೆವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ. ಬೆಂಗಳೂರು, ಬೀದರ್, ದೇವನಹಳ್ಳಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಗದಗ ವಿಜಯಪುರ ಮೈಸೂರು, ಆನೇಕಲ್ ಸೇರಿದಂತೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು ಮುಷ್ಕರದಲ್ಲಿ ಪಾಲ್ಗೊಂಡಿವೆ.

ತುರ್ತುಸೇವೆಯನ್ನು ನೀಡುತ್ತಿದ್ದು, ಹೊರರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಹಲವೆಡೆ ರೋಗಿಗಳು ಪರದಾಡುವ ಸ್ಥಿತಿ ವರದಿಯಾಗಿದೆ.

ಹೆರಿಗೆ ಮಾಡಿಸಲು ವೈದ್ಯರ ನಕಾರ:

ಹುನಗುಂದ ತಾಲೂಕಿನ ಇಳಕಲ್ ಪಟ್ಟಣದಲ್ಲಿ ಹೆರಿಗೆಗೆ ಎಂದು ಬಂದ ಮಹಿಳೆಗೆ ಚಿಕಿತ್ಸೆ ನೀಡಲು ವೈದ್ಯರು ನಿರಾಕರಿಸಿದ್ದಾರೆ, ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಆಂಬುಲೆನ್ಸ್ ನಲ್ಲಿ ಮಹಿಳೆಯನ್ನು ಬೇರೆ ಆಸ್ಪತ್ರೆಗೆ ಕರೆದೊಯ್ದಿರುವುದಾಗಿ ವರದಿ ವಿವರಿಸಿದೆ.

Advertisement

ಉಡುಪಿ ಜಿಲ್ಲೆಯಲ್ಲಿ 25ಕ್ಕೂ ಅಧಿಕ ಖಾಸಗಿ ಆಸ್ಪತ್ರೆಗಳು ಬಂದ್:

ಖಾಸಗಿ ಆಸ್ಪತ್ರೆಗಳ ವೈದ್ಯರ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿ ಉಡುಪಿಯ ಜಿಲ್ಲೆಯ ಸುಮಾರು 25ಕ್ಕೂ ಅಧಿಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಆಸ್ಪತ್ರೆಯ ಹೊರಭಾಗದಲ್ಲಿ ತುರ್ತು ಚಿಕಿತ್ಸೆ ಸೇವೆಗಳು ಲಭ್ಯವಿಲ್ಲ ಎಂಬ ಬರಹವನ್ನು ತೂಗುಹಾಕಲಾಗಿದೆ. ಆಸ್ಪತ್ರೆಯಲ್ಲಿನ ಹೊರರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಲಾಗಿದೆ. ಆದರೆ ಮಣಿಪಾಲ್ ಆಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ಘಟಕ ಕಾರ್ಯನಿರ್ವಹಿಸುತ್ತಾ ಇದೆ. ಹೊರರೋಗಿಗಳ ವಿಭಾಗದಲ್ಲಿ ಸೇವೆ ಸ್ಥಗಿತಗೊಳಿಸಿದೆ ಎಂದು ಮಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next