Advertisement

ಉಡುಪಿಗೆ ಬರಲಿದೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು: ಶಾಸಕ ರಘುಪತಿ ಭಟ್‌

01:06 AM Apr 01, 2022 | Team Udayavani |

ಉಡುಪಿ: ಜಿಲ್ಲೆಗೆ ಕೇಂದ್ರ ಸರಕಾರದ ಖಾಸಗಿ ಸಾರ್ವಜನಿಕ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಬರಲಿದ್ದು, ಅದರ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು ಸರಕಾರಿ ಸ್ವಾಮ್ಯದ ಸಂಸ್ಥೆಯೊಂದು ಶೀಘ್ರ ಉಡುಪಿಗೆ ಬರಲಿದೆ ಎಂದು ಶಾಸಕ ಕೆ. ರಘುಪತಿ ಭಟ್‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಬಡ ರೋಗಿಗಳಿಗೆ ಅನುಕೂಲವಾಗುವಂತಿದ್ದರೆ ಮಾತ್ರ ಒಪ್ಪಿಗೆ ಸೂಚಿಸಲಿದ್ದೇವೆ. ಜಿಲ್ಲಾಸ್ಪತ್ರೆ ಇರುವ ಜಾಗ ಸಹಿತ 15 ಎಕರೆ ಜಮೀನು ನಗರದ ಒಳಗೆ ಲಭ್ಯವಾಗಿದೆ. ಕೊಳಲಗಿರಿಯಲ್ಲಿ 32 ಎಕರೆ ಮೀಸಲಿಟ್ಟಿದ್ದೇವೆ. ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಿಂದ 200 ಬೆಡ್‌, ಜಿಲ್ಲಾಸ್ಪತ್ರೆಯಿಂದ 250 ಸೇರಿ 450 ಬೆಡ್‌ಗಳು  ಸೇವೆಗೆ ಸಿಗಲಿದೆ. ಕೂಸಮ್ಮ ಶಂಭು ಶೆಟ್ಟಿ

ಹಾಜಿ ಅಬ್ದುಲ್ಲಾ ಸ್ಮಾರಕ ಆಸ್ಪತ್ರೆಯನ್ನು ಸರಕಾರ ಮರಳಿ ಪಡೆದಿದೆ. ಹಿಂದೆ ಸರಿಯಾಗಿ ಒಪ್ಪಂದವೇ ಆಗಿರಲಿಲ್ಲ.  ಆಸ್ಪತ್ರೆಯ

ಹೆಸರು ಉಳಿಸಿಕೊಳ್ಳಲಿದ್ದೇವೆ ಎಂದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯೀ ಸಮಿತಿ ಅಧ್ಯಕ್ಷ ಡಿ. ಬಾಲಕೃಷ್ಣ ಶೆಟ್ಟಿ, ಸದಸ್ಯೆ ರಶ್ಮಿ ಭಟ್‌, ಉಡಾ ಅಧ್ಯಕ್ಷ ಮನೋಹರ್‌ ಕಲ್ಮಾಡಿ, ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಬಿಆರ್‌ಎಸ್‌ ಸಿಬಂದಿ ಮನವಿ :

Advertisement

ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ಸಿಬಂದಿ ವರ್ಗ ಗುರುವಾರ ಜಿಲ್ಲಾ ಪತ್ರಿಕಾ ಭವನದಲ್ಲಿ  ಕೆ. ರಘುಪತಿ ಭಟ್‌ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಹೇಳಿಕೊಂಡರು. ಸರಿಯಾಗಿ ವೇತನ ಆಗುತ್ತಿಲ್ಲ. ಸರಕಾರ ಈಗ ಆಸ್ಪತ್ರೆಯನ್ನು ತನ್ನ ತೆಕ್ಕೆಗೆ ಪಡೆದಿರುವುದರಿಂದ ಉದ್ಯೋಗ ಅಭದ್ರತೆಯೂ ಹೆಚ್ಚಾಗುತ್ತಿದೆ. ಸಮಸ್ಯೆ ಪರಿಹಾರ ನೀಡುವಂತೆ ಕೋರಿಕೊಂಡರು. ಶಾಸಕ ಭಟ್‌ ಪ್ರತಿಕ್ರಿಯಿಸಿ, ಸದ್ಯಕ್ಕೆ ನಿಮ್ಮ ಉದ್ಯೋಗಕ್ಕೆ ಸಮಸ್ಯೆಯಾಗುವುದಿಲ್ಲ. ಸಂಪೂರ್ಣವಾಗಿ ಸರಕಾರದ ವಶಕ್ಕೆ ಬಂದ ಅನಂತರ ನಿಮ್ಮನ್ನು ಯಾವ ರೀತಿಯಲ್ಲಿ ಉಳಿಸಿಕೊಳ್ಳಬೇಕು ಎಂಬುದನ್ನು ಯೋಚಿಸಲಿದ್ದೇವೆ. ಖಾಯಂ ಮಾಡಲು ಸಾಧ್ಯವಿಲ್ಲ. ಹಸ್ತಾಂತರ ಪ್ರಕ್ರಿಯೆ ಇನ್ನಷ್ಟೆ ನಡೆಯಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next