Advertisement

Private School: ಅಗ್ನಿ ಸುರಕ್ಷಾ ಪ್ರಮಾಣಪತ್ರ ಕಡ್ಡಾಯ ರದ್ದು

11:49 PM Sep 22, 2023 | Team Udayavani |

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಅಗ್ನಿ ಸುರಕ್ಷಾ ಪ್ರಮಾಣಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಹೈಕೋರ್ಟ್‌ ರದ್ದುಪಡಿಸಿದೆ.

Advertisement

ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ಪ್ರಶ್ನಿಸಿ ಪ್ರಜ್ಞಾ ಎಜುಕೇಷನ್‌ ಸೊಸೈಟಿ ಸಹಿತ 22 ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಮೂರ್ತಿ ಅಶೋಕ್‌ ಎಸ್‌. ಕಿಣಕಿ ಅವರ ಪೀಠ ಈ ಆದೇಶ ನೀಡಿದೆ.

ಶಿಕ್ಷಣ ಇಲಾಖೆಯು 2020 ಮತ್ತು 2021ರಲ್ಲಿ ಸುತ್ತೋಲೆ ಹೊರಡಿಸಿ, ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕಡ್ಡಾಯವಾಗಿ ಅಗ್ನಿ ಸುರಕ್ಷಾ ಕ್ರಮಗಳನ್ನು ಕೈಗೊಂಡು, ಆ ಕುರಿತು ಪ್ರಮಾಣಪತ್ರ ಪಡೆದುಕೊಳ್ಳಬೇಕು. ಜತೆಗೆ ರಾಷ್ಟ್ರೀಯ ಕಟ್ಟಡ ಸಂಹಿತೆ ಪ್ರಕಾರ ಎಂಜಿನಿಯರ್‌ಗಳಿಂದ ಮೌಲ್ಯಮಾಪನ ಮಾಡಿಸಬೇಕು ಎಂದು ಸೂಚಿಸಿತ್ತು. ಆದರೆ ಈ ನಿಯಮದಿಂದ ಸರಕಾರಿ ಶಾಲೆಗಳಿಗೆ ವಿನಾಯಿತಿ ನೀಡಿ ತಾರತಮ್ಯ ಎಸಗಲಾಗಿದೆ ಎಂದು ಆಕ್ಷೇಪಿಸಿ ಖಾಸಗಿ ಶಾಲೆಗಳು ಹೈಕೋರ್ಟ್‌ ಮೆಟ್ಟಿಲೇರಿದ್ದವು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, 2020-21ಕ್ಕಿಂತ ಮೊದಲು ಕಾರ್ಯನಿರ್ವಹಿಸುತ್ತಿದ್ದ ರಾಜ್ಯ ಪಠ್ಯಕ್ರಮದ ಖಾಶಗಿ ಶಾಲೆಗಳಿಗೆ ಸರಕಾರದ ಈ ಸುತ್ತೋಲೆಗಳು ಅನ್ವಯಿಸುವುದಿಲ್ಲ ಎಂದು ತಿಳಿಸಿ, ಎರಡೂ ಸುತ್ತೋಲೆಗಳನ್ನು ರದ್ದುಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next