Advertisement

ಪ್ಯಾಕೇಜ್‌ಗಾಗಿ ಖಾಸಗಿ ಶಾಲಾ ಶಿಕ್ಷಕರ ಪ್ರತಿಭಟನೆ

03:12 PM Sep 20, 2020 | Suhan S |

ರಾಮನಗರ: ಕೋವಿಡ್‌ 19 ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್‌ ಘೋಷಣೆ ಸೇರಿದಂತೆ ಇತರೆ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.

Advertisement

ನಗರದ ಜಿಲ್ಲಾ ಕಚೇರಿಯ ಸಂಕಿರ್ಣದ ಮುಂಭಾಗ ಪ್ರತಿಭಟನೆ ಕೈಗೊಂಡ ಪದಾಧಿಕಾರಿಗಳು, ಖಾಸಗಿ ಕಾಲೇಜುಗಳಲ್ಲಿ ಕಾಲ್ಪನಿಕ ವೇತನ ಬಡ್ತಿ ನೀಡುವ ನಿಟ್ಟಿನಲ್ಲಿ ಬಸವರಾಜ ಹೊರಟ್ಟಿ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬೇಡಿಕೆ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಒಕ್ಕೂಟದ ರಾಜ್ಯ ಮಹಾ ಪೋಷಕ ಜಾಲಮಂಗಲ ನಾಗರಾಜ್, 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಲ್ಲಿ ದುಡಿಯುತ್ತಿರುವ ಶಿಕ್ಷಕರು, ಶಿಕ್ಷಕೇತರರಿಗೆ ಯಾವುದೇ ಭರವಸೆ ಇಲ್ಲದಂತಾಗಿದೆ. ಕೂಡಲೆ ಅನುದಾನ ನೀಡಬೇಕು ಎಂದರು.

ರಾಜ್ಯ ಸರ್ಕಾರ ನಮ್ಮ ಮನವಿ ಆಲಿಸದೆ, ಇದೇ ರೀತಿಯಲ್ಲಿ ನಿದ್ರಾವಸ್ಥೆಯಲ್ಲಿ ಮುಂದುವರಿದರೆ, ಮುಂದಿನ ದಿನಗಳಲ್ಲಿ ರಾಜಧಾನಿಯಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು, ಆಗಲೂ ಸರ್ಕಾರ ಸ್ಪಂದಿಸದಿದ್ದರೆ ಆತ್ಮಹತ್ಯೆ ಒಂದೇ ಉಳಿದಿರುವ ದಾರಿ ಎಂದರು.

ಸಂಘಟನೆಯ ಜಿಲ್ಲಾಧ್ಯಕ್ಷ ಜವರೇಗೌಡ ಮಾತನಾಡಿ, ಸರ್ಕಾರದ ನಿರ್ಲಕ್ಷ್ಯ ಧೋರಣೆ ಮತ್ತು ಕೋವಿಡ್ ಸಂಕಷ್ಟದ ನಡುವೆ 1995ರನಂತರಪ್ರಾರಂಭವಾದ ಕನ್ನಡ ಮಾಧ್ಯಮ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿ ಅರೆ ಹೊಟ್ಟೆಯಲ್ಲಿ ಜೀವನ ಸಾಗಿಸುತ್ತಿದ್ದೇವೆ. ನಮಗೆ ಬೇರೆ ಯಾವುದೇ ಆದಾಯದ ಮೂಲವಾಗಲಿ, ಕಸುಬುಗಳಾಗಲಿ ಗೊತ್ತಿರದ ಕಾರಣ, ಶಿಕ್ಷಣ ಸಂಸ್ಥೆಗಳನ್ನೇ ನಂಬಿ ಬದುಕುತ್ತಿದ್ದೇವೆ. ನಮ್ಮೆಲ್ಲರ ಬದುಕು ಬೀಳುವ ಮುನ್ನ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

Advertisement

ಮನವಿಯನ್ನು ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ಬಿ.ಎಸ್‌.ವೆಂಕಟಾ ಚಲಪತಿ ಸ್ವೀಕರಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುತ್ತುಸ್ವಾಮಿ, ಸಂಘಟನಾ ಕಾರ್ಯದರ್ಶಿ ಶಿವಮಾದು, ಖಜಾಂಚಿ ಬಿ.ಕುಳ್ಳೇ ಗೌಡ, ರಾಮನಗರ ತಾಲೂಕು ಅಧ್ಯಕ್ಷ ರವಿಗೌಡ, ಪದಾಧಿಕಾರಿಗಳಾದ ಸ್ವಾಮಿ ಗೌಡ, ಸಾವಿತ್ರಮ್ಮ, ಭಾರತಿ, ವರಲಕ್ಷಿ ¾à, ಕೀರ್ತಿರಾಜ್‌, ಸಿದ್ದರಾಜು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next