Advertisement

ಸರ್ಕಾರದ ದ್ವಂದ್ವ ನಿಲುವು ವಿರೋಧಿಸಿ: ಖಾಸಗಿ ಶಾಲಾ-ಕಾಲೇಜು ಒಕ್ಕೂಟದಿಂದ ಬೃಹತ್ ಪ್ರತಿಭಟನೆ

08:45 PM Dec 01, 2020 | mahesh |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಖಾಸಗಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಶಿಕ್ಷಕರ ಸಂಕಷ್ಟಗಳಿಗೆ ಸ್ಪಂದಿಸದೆ ದ್ವಂದ್ವ ನಿಲುವು ಹೊಂದಿರುವ ರಾಜ್ಯ ಸರ್ಕಾರದ ಧೋರಣೆಯನ್ನು ವಿರೋಧಿಸಿ ಡಿಸೆಂಬರ್ 02ರಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಜಿಲ್ಲಾ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ತಿಳಿಸಿದರು.

Advertisement

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಸೆಂಬರ್ 02 ರಂದು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕಾಲ್ನಡಿಗೆ ಜಾಥವನ್ನು ನಡೆಸಲಿದ್ದೇವೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆ ಸಹಿತ ರಾಜ್ಯಾದಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರ ಕಷ್ಟಗಳಿಗೆ ಸ್ಪಂದಿಸಲು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಈ ಹಿನ್ನೆಲೆಯಲ್ಲಿ ಸರ್ಕಾರದ ದ್ವಂದ್ವ ನಿಲುವನ್ನು ವಿರೋಧಿಸಿ ಅನಿವಾರ್ಯವಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ರಾಜ್ಯದಲ್ಲಿ ಕೊರೊನಾ ಸಂಕಷ್ಟದ ಅವಧಿಯಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರು, ಕೂಲಿ ಕಾರ್ಮಿಕರು, ಸೇರಿದಂತೆ ಹಲವರಿಗೆ ಸರ್ಕಾರ ಪರಿಹಾರ ನೀಡಿದೆ ಆದರೆ ಖಾಸಗಿ ಶಾಲೆಗಳಿಗೆ ವಿಶೇಷ ಅನುದಾನವನ್ನು ನೀಡಿಲ್ಲ ಆದರೆ ಸರ್ಕಾರ ನಿಗಮ ಮತ್ತು ಪ್ರಾಧಿಕಾರಗಳನ್ನು ರಚಿಸುವ ಜೊತೆಗೆ ಸಾವಿರಾರು ಕೋಟಿ ರೂ.ಗಳನ್ನು ಅನುದಾನವನ್ನು ನೀಡುತ್ತಿದೆ. ಸಮಾಜವನ್ನು ನಿರ್ಮಿಸಲು ಪ್ರಮುಖ ಪಾತ್ರವಹಿಸುವ ಖಾಸಗಿ ಶಾಲೆಗಳ ಶಿಕ್ಷಕರ ಹಿತವನ್ನು ಸರ್ಕಾರ ಕಡೆಗಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಖಾಸಗಿ ಶಾಲೆಗಳ ನವೀಕರಣಕ್ಕೆ ಸಂಬಂಧಿಸಿದಂತೆ ಕಠಿಣ ಆದೇಶವನ್ನು ಜಾರಿಗೊಳಿಸುವ ಮೂಲಕ ಸರ್ಕಾರ ಖಾಸಗಿ ಶಿಕ್ಷಣದ ಸಂಸ್ಥೆಗಳು ಸಂಕಷ್ಟವನ್ನು ಎದುರಿಸುವಂತಾಗಿದೆ. ಶಾಲೆಯಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಕನಿಷ್ಟ 21ಸಾವಿರ ರೂ.ಗಳನ್ನು ವೇತನವನ್ನು ನೀಡಬೇಕೆಂದು ಆದೇಶ ನೀಡುತ್ತಿದ್ದಾರೆ ಆದರೆ ಪೋಷಕರಿಂದ ಎಷ್ಟು ಶುಲ್ಕವನ್ನು ಪಡೆಯಬೇಕೆಂಬುದನ್ನು ನಿರ್ದಿಷ್ಟವಾಗಿ ಆದೇಶವನ್ನು ಹೊರಡಿಸಿದೆ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ದ್ವಂದ್ವ ಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಗೊಂದಲದ ವಾತಾವರಣವನ್ನು ಸೃಷ್ಟಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ಜಿಲ್ಲೆಯಲ್ಲಿ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು ಮುಚ್ಚಿ ಹೋಗಿವೆ ಖಾಸಗೀ ಶಿಕ್ಷಣ ಸಂಸ್ಥೆಗಳನ್ನು ನೆಚ್ಚಿಕೊಂಡಿದ್ದ ಶಿಕ್ಷಕರು ಮತ್ತು ಸಿಬ್ಬಂದಿ ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ ಈ ವಿಚಾರವನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳ ಮೂಲಕ ಸರ್ಕಾರದ ಗಮನ ಸೆಳೆಯಲು ಸಾಂಕೇತಿಕವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯವರು ಧರಣಿ ನಡೆಸಿ ಎಚ್ಚರಿಸಿದರು ಸಹ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಅದಕ್ಕಾಗಿ ಡಿಸೆಂಬರ್ 02ರಂದು ಚಿಕ್ಕಬಳ್ಳಾಪುರ ಜಿಲ್ಲೆಯ 6ತಾಲೂಕುಗಳ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ನಿರ್ದೇಶಕರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಹೋರಾಟ ನಡೆಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟದ ಕಾರ್ಯದರ್ಶಿ ಎನ್.ಡಿ ಪ್ರಸನ್ನಕುಮಾರ್, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಮೋಹನ್‍ಕುಮಾರ್, ಜಿಲ್ಲಾ ಸಂಚಾಲಕ ಮುಶ್ತಾಕ್, ಜಾರ್ಜ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next