Advertisement

ವೇತನಕ್ಕಾಗಿ ಖಾಸಗಿ ಶಾಲಾ ಶಿಕ್ಷಕರ ಮನವಿ

06:15 AM Jul 01, 2020 | Lakshmi GovindaRaj |

ಮೈಸೂರು: ಲಾಕ್‌ಡೌನ್‌ ಜಾರಿಯಾದ ಪರಿಣಾಮ ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಉಪನ್ಯಾಸಕರಿಗೆ ವೇತನವಿಲ್ಲದೆ ಸಂಕಷ್ಟದಲ್ಲಿದ್ದು, ಸರ್ಕಾರ ಸೂಕ್ತ ಪರಿಹಾರ  ನೀಡುವಂತೆ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜು ಬೋಧಕ ಮತ್ತು ಬೋಧಕೇತರರ ಸಂಘದಿಂದ ಪ್ರತಿಭಟನೆ ನಡೆಯಿತು.

Advertisement

ಸಂಘದ ಅಧ್ಯಕ್ಷ ರಾಜಶೇಖರಮೂರ್ತಿ ಮಾತನಾಡಿ, ಕೋವಿಡ್‌-19 ಪರಿಸ್ಥಿತಿಯಿಂದ ಖಾಸಗಿ,  ಅನುದಾನ ರಹಿತ ಶಾಲಾ ಕಾಲೇಜು ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಬೀದಿ ಪಾಲಾಗಿದ್ದಾರೆ. ರಾಜ್ಯ ಮಟ್ಟದಲ್ಲಿ ಆಡಳಿತ ಮಂಡಳಿಗಳ ಸಂಘದ ಪದಾಧಿಕಾರಿಗಳ ಜೊತೆಗೆ ಸರ್ಕಾರ ಮಧ್ಯ ಪ್ರವೇಶಿಸಿ ಸೂಕ್ತ ಪರಿಹಾರ ನೀಡಬೇಕು. ಖಾಸಗಿ ಅನುದಾನ ರಹಿತ ಶಿಕ್ಷಕ ಮತ್ತು ಶಿಕ್ಷಕೇತರ ಕುಟುಂಬಗಳಿಗೆ ಕೋವಿಡ್‌ ವೈರಸ್‌ ತಗುಲಿದರೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು.

ಈ ಪರಿಹಾರ ವನ್ನು ಟೀಚರ್‌ ವೆಲ್ಫೆàರ್‌ ಫ‌ಂಡ್‌ ಮತ್ತು ಸ್ಟೂಡೆಂಟ್‌ ವೆಲ್ಫೆàರ್‌ ಫ‌ಂಡ್‌ ಕಲ್ಯಾಣ  ನಿಧಿ ಬಳಸಿಕೊಳ್ಳುವುದರ ಮೂಲಕ ಪರಿಹಾರ ನೀಡಬೇಕು. ಆರ್‌ಟಿಇ ಯೋಜನೆಗೆ ಒಳಪಡದ ಖಾಸಗಿ ಶಾಲಾ ಕಾಲೇಜು ಮತ್ತು ಪದವಿ ಕಾಲೇಜುಗಳ ಶಿಕ್ಷಕ,ಉಪನ್ಯಾಸಕರಿಗೂ ಕೂಡ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.

ಸೇವಾ ಭದ್ರತೆ, ಆರೋಗ್ಯ ಭದ್ರತೆ ಸೇರಿದಂತೆ ಯಾವುದೇ ಸೌಕರ್ಯವಿಲ್ಲದೆ ಕಾರ್ಯ ನಿರ್ವಹಿಸುವ ನಾವು ಲಾಕ್‌ಡೌನ್‌ನಿಂದ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದೇವೆ. ಮೈಸೂರು ಭಾಗದಲ್ಲಿ 80 ಸಾವಿರ ಶಿಕ್ಷಕರು, ಉಪನ್ಯಾಸ ಕರು ವೇತನವಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದೇವೆ.  ಕಾರ್ಮಿಕರಿಗೆ, ಕ್ಷೌರಿಕರಿಗೆ ನೀಡಿದಂತೆ ನಮ್ಮಗೂ ಕೋವಿಡ್‌ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಡಾ.ಅಂತೋಣಿ ಪಾಲ್‌ರಾಜ್‌,  ನಾಗೇಂದ್ರ, ನಟೇಶ್‌, ಇತತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next