Advertisement

ಫೆ.15ಕ್ಕೆ ರಾಜ್ಯಾದ್ಯಂತ ಖಾಸಗಿ ಶಾಲೆಗಳ ಬಂದ್‌ 

03:45 AM Jan 30, 2017 | Team Udayavani |

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆ.15ರಂದು ರಾಜ್ಯದ ಎಲ್ಲ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳನ್ನು ಬಂದ್‌ ಮಾಡಿ ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟ ನಿರ್ಧರಿಸಿದೆ. 

Advertisement

ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್‌ ಹಾಲ್‌ನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಕಡೆಗಣಿಸುತ್ತಿದ್ದು, ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಬಾರದು.

ಒಗ್ಗೂಡಿ ಹೋರಾಟಕ್ಕೆ ಮುಂದಾಗಬೇಕು. ಫೆ.10ರವರೆಗೆ ಜಿಲ್ಲಾಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದ ಸಭೆಗಳನ್ನು ಮಾಡಬೇಕು. ಸ್ವಾಮೀಜಿಗಳ ಸಹಕಾರ ಪಡೆಯಬೇಕು. ಪ್ರಭಾಕರ ಕೋರೆ ಅವರ ಅಧ್ಯಕ್ಷತೆಯಲ್ಲಿ ಹೋರಾಟ ನಡೆಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next