Advertisement
ದಿನಸಿ ಖರೀದಿಗಾಗಿ ಮೀಸಲಿಟ್ಟಿರುವ ಬೆಳಗ್ಗೆ 7ರಿಂದ 12ರ ವರೆಗಿನ ಸಮಯ ವನ್ನು ಬಹುತೇಕ ಜನರು ದುರುಪಯೋಗ ಮಾಡುತ್ತಿದ್ದು, ಅನಗತ್ಯ ತಿರುಗಾಟ ಅಧಿಕವಾಗುತ್ತಿದೆ. ಇದನ್ನು ಮನಗಂಡು ಜಿಲ್ಲಾಡಳಿತ ಖಾಸಗಿ ವಾಹನ ಸಂಚಾರವನ್ನೇ ನಿರ್ಬಂಧಿಸುವ ತೀರ್ಮಾನಕ್ಕೆ ಬಂದಿದೆ.
Related Articles
Advertisement
214ರಲ್ಲಿ 205 ನೆಗೆಟಿವ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 214 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 9 ಪಾಸಿಟಿವ್ ಬಂದಿದ್ದರೆ, ಉಳಿದ 205 ಪ್ರಕರಣ ನೆಗೆಟಿವ್ ಬಂದಿದೆ.
5,875 ಮಂದಿ ಗೃಹ ನಿಗಾವಣೆ ಯಲ್ಲಿದ್ದು, 300 ಮಂದಿ 28 ದಿನಗಳ ಗೃಹ ನಿಗಾವಣೆ ಪೂರೈಸಿದ್ದಾರೆ. ಇಎಸ್‌ಐ ಆಸ್ಪತ್ರೆಯಲ್ಲಿ 30 ಮಂದಿ ನಿಗಾದಲ್ಲಿದ್ದಾರೆ. 239 ಮಂದಿಯ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, 223 ಮಾದರಿ ಸ್ವೀಕೃತವಾಗಿದೆ. 16 ಮಂದಿಯ ಮಾದರಿಯನ್ನು ಗುರುವಾರ ಪರೀಕ್ಷೆಗೆ ಕಳುಹಿಸಲಾ ಗಿದೆ. 16 ಮಂದಿಯ ವರದಿ ಗುರುವಾರ ಆರೋಗ್ಯ ಇಲಾಖೆ ಕೈ ಸೇರಿದ್ದು, ಎಲ್ಲವೂ ನೆಗೆಟಿವ್ ಆಗಿದೆ. 3 ಮಂದಿ ಹೊಸದಾಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಮಂಗಳೂರು ನಗರದಲ್ಲಿ 154 ವಾಹನಗಳು ವಶಕ್ಕೆ
ಮಂಗಳೂರು: ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ರಸ್ತೆಯಲ್ಲಿ ಅನಾವಶ್ಯಕ ವಾಗಿ ವಾಹನ ಚಲಾಯಿಸಿದವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರಗಿಸಿದ್ದು, ನಗರದಲ್ಲಿ ಸಂಜೆ ವೇಳೆಗೆ 154 ಖಾಸಗಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ| ಹರ್ಷ ತಿಳಿಸಿದ್ದಾರೆ. ಎಲ್ಲರೂ ನಿಯಮಗಳಿಗೆ ಬದ್ಧರಾಗಿ ನಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಸೆಂಟ್ರಲ್ ಮಾರುಕಟ್ಟೆಯ ಹಣ್ಣು ,ತರಕಾರಿ ಬೈಕಂಪಾಡಿಗೆ ಸ್ಥಳಾಂತರ
ನಗರದ ಸೆಂಟ್ರಲ್ ಮಾರುಕಟ್ಟೆಯ ಎಲ್ಲ ಹಣ್ಣು ಮತ್ತು ತರಕಾರಿ ಸಗಟು ವ್ಯಾಪಾರಿಗಳನ್ನು ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಚಿಲ್ಲರೆ ವ್ಯಾಪಾ ರಿಗಳನ್ನು ಹೊರತುಪಡಿಸಿ ಸಾರ್ವಜನಿಕ ಪ್ರವೇಶವನ್ನೂ ನಿಬ ìಂಧಿಸಲಾಗಿದೆ. ಬಂದರಿನಲ್ಲಿ ದಿನಸಿ ವಸ್ತುಗಳ ಸಗಟು ವ್ಯಾಪಾರ ಎಂದಿನಂತೆ ಮುಂದುವರಿಯುತ್ತದೆ. ಸಗಟು ವ್ಯಾಪಾರಸ್ಥರು ರಿಟೇಲ್ ವ್ಯಾಪಾರಸ್ಥರಿಗೆ ಮಾತ್ರವೇ ಮಾರಾಟ ಮಾಡಬೇಕು. ಬಂದರಿನಲ್ಲಿ ಬೆಳಗ್ಗೆ 7ರಿಂದ 12ರ ವರೆಗೆ ವಾಹನಗಳ ಸಾರಕು ಇಳಿಸಲು ಅವಕಾಶವಿದೆ. ಮಧ್ಯಾಹ್ನ 1ರಿಂದ ಸಂಜೆ 7ರ ವರೆಗೆ ಸಗ ಟು ಮಾರಾಟಗಾರರು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.