Advertisement

ಪ್ರಿಯಕೃಷ್ಣ, ಕೃಷ್ಣಪ್ಪ ಮತ ಯಾಚನೆ

12:35 PM Apr 27, 2018 | Team Udayavani |

ಬೆಂಗಳೂರು: ವಿಜಯನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಕೃಷ್ಣಪ್ಪ ಹಾಗೂ ಗೋವಿಂದರಾಜ ನಗರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಕೃಷ್ಣ ಅವರು ಗುರುವಾರ ಕ್ಷೇತ್ರದ ವಿವಿಧೆಡೆ ಮತಯಾಚನೆ ನಡೆಸಿದರು.

Advertisement

ವಿಜಯನಗರ ವಿಧಾನಸಭೆ ಕ್ಷೇತ್ರ ಕೆಂಪಾಪುರ ಅಗ್ರಹಾರ, ವಿಜಯನಗರ, ಹೊಸಹಳ್ಳಿ, ಅತ್ತಿಗುಪ್ಪೆ, ಹಂಪಿನಗರ, ಬಾಪೂಜಿನಗರ, ಗಾಳಿ  ಆಂಜನೇಯ ದೇವಾಲಯ, ದೀಪಾಂಜಲಿ ನಗರ ಸೇರಿ ಎಂಟು ವಾರ್ಡ್‌ಗಳು ಹಾಗೂ ಗೋವಿಂದರಾಜನಗರ ಕ್ಷೇತ್ರವು ಕಾವೇರಿಪುರ, ಗೋವಿಂದರಾಜನಗರ, ಅಗ್ರಹಾರ ದಾಸರಹಳ್ಳಿ, ಡಾ.ರಾಜ್‌ಕುಮಾರ್‌ ವಾರ್ಡ್‌, ಮಾರೇನಹಳ್ಳಿ, ಮಾರುತಿಮಂದಿರ, ಮೂಡಲಪಾಳ್ಯ, ನಾಗರಭಾವಿ, ನಾಯಂಡಹಳ್ಳಿ ವಾರ್ಡ್‌ಗಳಲ್ಲಿ ಸ್ಥಳೀಯ ಕಾಂಗ್ರೆಸ್‌ ಪಾಲಿಕೆ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಮುಖಂಡರ ಜತೆಗೂಡಿ ಮತಯಾಚನೆ ಮಾಡಿದರು.

ಎರಡೂ ಕ್ಷೇತ್ರಗಳಲ್ಲಿ ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸ್ವಯಂ ಪ್ರೇರಿತರಾಗಿ ಮತದಾರರು ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಂ.ಕೃಷ್ಣಪ್ಪ, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಜನರ ಸಮಸ್ಯೆಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡಿದ್ದೇನೆ ಎದು ಹೇಳಿದರು. ಈ ಬಾರಿಯೂ ಮತದಾರರು ತಮಗೆ ಆಶೀರ್ವಾದ ಮಾಡುವ ಭರವಸೆಯಿದೆ. ಮತಯಾಚನೆ ಸಂರ್ಭದಲ್ಲಿ ಕ್ಷೇತ್ರದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಪ್ರಿಯಕೃಷ್ಣ ಮಾತನಾಡಿ, ಕ್ಷೇತ್ರದಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ, ಒಳಚರಂಡಿ ವ್ಯವಸ್ಥೆಗೆ ಹೆಚ್ಚು ಒತ್ತು ಕೊಟ್ಟಿದ್ದೇನೆ. ಕೊಳಗೇರಿಗಳಲ್ಲಿ ಸಿಮೆಂಟ್‌ ರಸ್ತೆ, ಹಕ್ಕುಪತ್ರ ವಿತರಣೆ, ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ ಎಂದು ತಿಳಿಸಿದರು. ಕ್ಷೇತ್ರದ ಜನತೆ ಮತ್ತೂಮ್ಮೆ ತಮ್ಮನ್ನು ಆಯ್ಕೆ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next